KarnatakaLatestLeading NewsMain Post

ರಾಜ್ಯಸಭೆಗೆ ಆಯ್ಕೆ ಹಿನ್ನೆಲೆ ಮಂತ್ರಾಲಯ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ

ರಾಯಚೂರು: ಗುರು ರಾಘವೇಂದ್ರ ಸ್ವಾಮಿಗಳ ಪರಮ ಭಕ್ತರಾದ ನಟ ಜಗ್ಗೇಶ್, ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ವೃಂದಾವನ ದರ್ಶನ ಪಡೆದರು.

ರಾಯರ ಮಠಕ್ಕೆ ಪತ್ನಿ ಪರಿಮಳ ಜೊತೆ ಭೇಟಿ ನೀಡಿದ ಜಗ್ಗೇಶ್ ರಾಜ್ಯಸಭೆಗೆ ಆಯ್ಕೆಯಾದ ಪ್ರಮಾಣ ಪತ್ರದ ಪ್ರತಿಯಿಟ್ಟು ಆಶೀರ್ವಾದ ಪಡೆದಿದ್ದಾರೆ. ನಟ ಜಗ್ಗೇಶ್ ಪೀಠಾಧಿಪತಿಗಳ ಪಾದ ಒತ್ತಿ ಸೇವೆ ಸಲ್ಲಿಸುವ ಮೂಲಕ ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ: ಕೈಲಾಸದಲ್ಲಿ ನಿತ್ಯಾನಂದನ ಮೂರ್ತಿಗೆ ಮಂಗಳಾರತಿ – ಎಲ್ಲಿದ್ದಾರೆ ನಿತ್ಯಾನಂದ?

ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ನಟ ಜಗ್ಗೇಶ್‌ಗೆ ಶುಭ ಹಾರೈಸಿ ಆಶೀರ್ವಚನ ನೀಡಿದ್ದಾರೆ.

ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ನಟ ಜಗ್ಗೇಶ್ ಮೊದಲ ಪ್ರಾಶಸ್ತ್ಯದ ಮತಗಳಿಂದ ಜಯಗಳಿಸಿದ್ದರು. ಇದನ್ನೂ ಓದಿ: ಮೋದಿ ಸರ್ಕಾರದ ಕೈಗೊಂಬೆಯಾಗಿರುವ EDಗೆ ಸಾಂವಿಧಾನಿಕ ಸಂಸ್ಥೆ ಎಂದು ಕರೆಸಿಕೊಳ್ಳುವ ಅರ್ಹತೆ ಇಲ್ಲ: ದಿನೇಶ್ ಗುಂಡೂರಾವ್

Leave a Reply

Your email address will not be published.

Back to top button