ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಸ್ತಿತ್ವಕ್ಕೆ ಬರುತ್ತಲೇ ಬಿಜೆಪಿ (BJP) ಸರ್ಕಾರದಿಂದ ಮಾನವೀಯ ದೃಷ್ಟಿಯಿಂದ ಸರ್ಕಾರಿ ಕೆಲಸ (Government Job) ಪಡೆದುಕೊಂಡಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಪತ್ನಿಗೆ ಇದೀಗ ಕೆಲಸದಿಂದ ಕೊಕ್ ನೀಡಲಾಗಿದೆ.
Advertisement
Advertisement
ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಮುಂಖಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ (Nutana Kumari) ಅವರಿಗೆ ಹಿಂದಿನ ಬಿಜೆಪಿ ಸರ್ಕಾರ ಮಾನವೀಯ ದೃಷ್ಟಿಯಿಂದ ಸರ್ಕಾರಿ ಕೆಲಸವನ್ನು ನೀಡಿತ್ತು. ಇದೀಗ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ಕಾಂಗ್ರೆಸ್ ರದ್ದುಗೊಳಿಸಿದೆ. ಇದನ್ನೂ ಓದಿ: ಪಿಎಸ್‌ಐ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು – ಲಕ್ಷಾಂತರ ಮೌಲ್ಯದ ವಸ್ತುಗಳು ಆಹುತಿ
Advertisement
Advertisement
ನೂತನ ಕುಮಾರಿ ಅವರನ್ನು 2022ರ ಸೆಪ್ಟೆಂಬರ್ 22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ಬೊಮ್ಮಾಯಿ ಸರ್ಕಾರ ನೇಮಕ ಮಾಡಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ನೂತನ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕಾಂಗ್ರೆಸ್‌ನ ಹೊಸ ಸರ್ಕಾರ ಬಂದ ತಕ್ಷಣ ನೆಟ್ಟಾರು ಪತ್ನಿ ನೂತನ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಇದನ್ನೂ ಓದಿ: ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್ – ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು