ಬೆಂಗಳೂರು: ಶುಕ್ರವಾರವಷ್ಟೇ ಬಹುಮತ ಗೆದ್ದ ಎಚ್‍ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸಚಿವ ಸಂಪುಟ ವಿಸ್ತರಣೆ ಸವಾಲಾಗಿ ಪರಿಣಮಿಸಿದೆ.
ಸಚಿವ ಸಂಪುಟ ರಚನೆ ಕಸರತ್ತು ದೆಹಲಿಗೆ ಶಿಫ್ಟ್ ಆಗಿದ್ದು, ಇಂದು ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಸಂಪುಟದಲ್ಲಿ ಸಿಎಂ ಸ್ಥಾನ ಸೇರಿ 12 ಸ್ಥಾನಗಳು ಜೆಡಿಎಸ್‍ಗೆ, ಉಪ ಮುಖ್ಯಮಂತ್ರಿ ಸೇರಿ 22 ಸ್ಥಾನಗಳು ಕಾಂಗ್ರೆಸ್ಸಿಗೆ ಹಂಚಿಕೆಯಾಗಿವೆ.
Advertisement
ಆದರೆ ಉಭಯ ಪಕ್ಷಗಳಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ದೊಡ್ಡ ಪಟ್ಟಿ ಇದೆ. ಹೀಗಾಗಿ ಜೆಡಿಎಸ್ ಒಂದು, ಕಾಂಗ್ರೆಸ್ 3 ಸಚಿವ ಸ್ಥಾನಗಳನ್ನು ಖಾಲಿ ಉಳಿಸಿಕೊಳ್ಳುವ ಚಿಂತನೆಯಲ್ಲಿವೆ. ಲೋಕೋಪಯೋಗಿ, ಕಂದಾಯ, ಹಣಕಾಸು, ಜಲ ಸಂಪನ್ಮೂಲ, ಇಂಧನ, ಕೈಗಾರಿಕೆ, ಬೆಂಗಳೂರು ಅಭಿವೃದ್ಧಿ ಈ 5 ಖಾತೆಗಳ ಪೈಕಿ ಐದನ್ನು ತಮಗೆ ಬಿಟ್ಟು ಕೊಡುವಂತೆ ಜೆಡಿಎಸ್ ಬೇಡಿಕೆ ಇಟ್ಟಿದೆ.
Advertisement
ಉಪ ಸಭಾಧ್ಯಕ್ಷ ಸ್ಥಾನ ಜೆಡಿಎಸ್‍ಗೆ ಹಂಚಿಕೆಯಾಗಿದ್ದು, ಸಕಲೇಶಪುರ ಶಾಸಕ ಎಚ್.ಕೆ. ಕುಮಾರಸ್ವಾಮಿ ಉಪಸಭಾಧ್ಯಕ್ಷರಾಗುವ ಸಾಧ್ಯತೆ ಇದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.
Advertisement