ಕೊಡಗು: ಹಾಸನದಲ್ಲಿ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ ಬಳಿಕ ಇದೀಗ ಕೊಡಗಿನಲ್ಲಿ (Kodagu) ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಕೊಡಗಿನ ತಾರೀಕಟ್ಟೆ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ (Elephant) ನಡೆಸಿದ್ದು, ತೋಟದ ಮಾಲೀಕ ಕೇಶವಯ್ಯ (50) ಮೃತಪಟ್ಟಿದ್ದಾರೆ. ಇದನ್ನೂ ಓದಿ: ಹತ್ತನೇ ದಿನಕ್ಕೆ ಕಾಲಿಟ್ಟ `ಆಶಾ’ ಪ್ರತಿಭಟನೆ – ಮನವೊಲಿಸುವಲ್ಲಿ ಸಕ್ಸಸ್ ಆಗ್ತಾರಾ ಸಿಎಂ?
ಮೃತ ಕೇಶವಯ್ಯ ಎಂದಿನಂತೆ ತೋಟಕ್ಕೆ ತೆರಳಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿದು ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಇತ್ತ ತೋಟಗಳಿಗೆ ತೆರಳಲು ಕಾರ್ಮಿಕರು ಹಾಗೂ ಮಾಲೀಕರಲ್ಲಿ ಆತಂಕ ಎದುರಾಗಿದೆ.
ಕೊಡಗಿನಲ್ಲಿ ಮುಂದುವರಿದ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಅರಣ್ಯ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಈಜಿಪ್ಟ್ನ ಹೆದ್ದಾರಿಯಲ್ಲಿ ಇಂಧನ ಲಾರಿ ಪಲ್ಟಿ – ಭಾರೀ ಬೆಂಕಿಗೆ ಅವಘಡಕ್ಕೆ 31 ಜನ ಬಲಿ
