ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದ್ದು ಮಿಶ್ರಾ ನಾಳೆ ಜಾಮೀನಿನ ಮೇಲೆ ಆಚೆ ಬರಲಿದ್ದಾರೆ.
ಪ್ರಕರಣ ಪ್ರಮುಖ ಆರೋಪಿಯಾಗಿದ್ದ ಹಿನ್ನೆಲೆ ಉತ್ತರ ಪ್ರದೇಶ ಪೊಲೀಸರು ಕೇಂದ್ರ ಗೃಹ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾರನ್ನು ಬಂಧಿಸಿ ಎಫ್‍ಐಆರ್ ದಾಖಲಿಸಲಾಗಿತ್ತು. ಕೆಳ ಹಂತದ ನ್ಯಾಯಲಯ ಜಾಮೀನು ತಿರಸ್ಕರಿಸಿದ ಬಳಿಕ ಅಲಹಾಬಾದ್ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ಒಡಹುಟ್ಟಿದವರೇ ಕಾಂಗ್ರೆಸ್ ನಾಶ ಮಾಡ್ತಾರೆ, ಚಿಂತಿಸಬೇಡಿ: ಯೋಗಿ ಆದಿತ್ಯನಾಥ್
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಫೆಬ್ರವರಿ 10ರಂದೇ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಮಂಜೂರು ಮಾಡುವ ವೇಳೆ ಸೆಕ್ಷನ್ 302 (ಕೊಲೆ) ಮತ್ತು 120 ಬಿ (ಅಪರಾಧದ ಪಿತೂರಿ)ಯನ್ನು ಹೈಕೋರ್ಟ್ ಪರಿಗಣಿಸಿರಲಿಲ್ಲ. ಇದಕ್ಕೆ ತಕರಾರು ವ್ಯಕ್ತವಾದ ಬಳಿಕ ಎರಡು ಸೆಕ್ಷನ್ ಸೇರಿಸಿ ಮರು ಅರ್ಜಿ ಸಲ್ಲಿಸಿ ಹೈಕೋರ್ಟ್ ಮೂಲಕ ಜಾಮೀನು ಪಡೆಯಲಾಗಿದೆ. ಇದನ್ನೂ ಓದಿ: ಲಖಿಂಪುರ ಗಲಭೆಯ ಮುಖ್ಯ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು
ಲಿಖಿತ ರೂಪದಲ್ಲಿ ಆದೇಶವಾದ ಬೆನ್ನಲ್ಲೆ ಜಾಮೀನು ಪ್ರಕ್ರಿಯೆ ಆರಂಭವಾಗಲಿದ್ದು ನಾಳೆ ವೇಳೆಗೆ ಆಶಿಶ್ ಮಿಶ್ರಾ ಜೈಲಿನಿಂದ ಹೊರ ಬರಲಿದ್ದಾರೆ. ಫೆ 10 ರಂದೇ ಜಾಮೀನು ಪಡೆದರು ಕಾನೂನು ತೊಡಕುಗಳಿಂದಾಗಿ ನಾಲ್ಕು ದಿನಗಳ ಬಳಿಕ ಜೈಲಿನಿಂದ ಮುಕ್ತಿ ಸಿಗುವಂತಾಗಿದೆ.