ಕೋಲ್ಕತ್ತಾ: 16ನೇ ಆವೃತ್ತಿಯ ಐಪಿಎಲ್‌ನಲ್ಲಿ (IPL 2023) ಕೋಲ್ಕತ್ತಾ ನೈಟ್‌ರೈಡರ್ಸ್ (KKR) ತಂಡದ ಆಲ್‌ರೌಂಡರ್ ಆಟಗಾರ ಶಾರ್ದೂಲ್ ಠಾಕೂರ್ (Shardul Thakur) ವೇಗದ ಅರ್ಧ ಶತಕ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.
ಆರ್‌ಸಿಬಿ (RCB) ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ 20 ಎಸೆತಗಳಲ್ಲಿ 50 ರನ್ ಸಿಡಿಸುವ ಮೂಲಕ 2023ರ ಐಪಿಎಲ್ ಆವೃತ್ತಿಯಲ್ಲಿ ವೇಗದ ಅರ್ಧಶತಕ ಬಾರಿಸಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ (Jos Buttler) ಕೇವಲ 20 ಎಸೆತಗಳಲ್ಲಿ 50 ರನ್ ಚಚ್ಚಿದ್ದರು. ಇದರಲ್ಲಿ 6 ಬೌಂಡರಿ, 3 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು. ಇದನ್ನೂ ಓದಿ: IPL 2023: ಕೊಹ್ಲಿ, ಡುಪ್ಲೆಸಿಸ್ ಶತಕದ ಜೊತೆಯಾಟಕ್ಕೆ ಮುಂಬೈ ಪಂಚರ್- RCBಗೆ 8 ವಿಕೆಟ್‌ಗಳ ಭರ್ಜರಿ ಜಯ
ಇದೀಗ ಜೋಸ್ ಬಟ್ಲರ್ ನಂತರ ಶಾರ್ದೂಲ್ ಠಾಕೂರ್ ಈ ವರ್ಷದ ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ 2ನೇ ಆಟಗಾರ ಹಾಗೂ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: IPL 2023: ಜೋಸ್, ಜೈಸ್ವಾಲ್, ಸ್ಯಾಮ್ಸನ್ ಸಿಡಿಲಬ್ಬರದ ಬ್ಯಾಟಿಂಗ್ – ರಾಜಸ್ಥಾನ್‌ಗೆ 72 ರನ್‌ಗಳ ಭರ್ಜರಿ ಜಯ
ಗುರುವಾರ ಆರ್‌ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಶಾರ್ದೂಲ್ ಠಾಕೂರ್ ಕೇವಲ 20 ಎಸೆತಗಳಲ್ಲಿ 50 ರನ್ (6 ಬೌಂಡರಿ, 3 ಸಿಕ್ಸರ್) ಸಿಡಿಸಿದ್ದು, ಈ ಪಂದ್ಯದಲ್ಲಿ ಶಾರ್ದೂಲ್ 29 ಎಸೆತಗಳಲ್ಲೇ ಸ್ಫೋಟಕ 68 ರನ್ (9 ಬೌಂಡರಿ, 3 ಸಿಕ್ಸರ್) ಚಚ್ಚಿದ್ದು, ತಂಡದ ಮೊತ್ತ 200ರ ಗಡಿ ದಾಟಿಸುವಲ್ಲಿ ಯಶಸ್ವಿಯಾಗಿದ್ದಾರೆ.