ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಭರ್ಜರಿ ಸರ್ಜರಿಯಾಗುವ ಸಾಧ್ಯತೆಯಿದ್ದು, ಸಂಘ, ಪಕ್ಷ ನಿಷ್ಠರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎನ್ನುವ ಸಲಹೆಯನ್ನು ಆರ್‌ಎಸ್‌ಎಸ್ ನಾಯಕರು ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ನೀಡಿದ್ದಾರೆ.
ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ನಡೆದ ಆರ್‌ಎಸ್‌ಎಸ್ ಬೈಠಕ್ ನಲ್ಲಿ ನಾಯಕರು ಅಮಿತ್ ಶಾ ಅವರಿಗೆ ಟಾಸ್ಕ್ ನೀಡಿದ್ದಾರೆ. ಸಂಘದ ಕಾರ್ಯತಂತ್ರಗಳನ್ನು ಗಟ್ಟಿಗೊಳಿಸಲು ಸಂಘ ನಿಷ್ಠ ನಾಯಕರೇ ಬಿಜೆಪಿಯನ್ನು ಮುನ್ನಡೆಸಬೇಕು. ಯಡಿಯೂರಪ್ಪ ಬದಲಾವಣೆ ಮಾಡಿದ್ದೇ ಆದಲ್ಲಿ ಪಕ್ಷ ಮುನ್ನಡೆಸಲು ಜಾತಿ, ಮಾಸ್ ಹುಡುಕಾಟ ನಡೆಸದೇ ಸಂಘದ ಜೊತೆ ಚೆನ್ನಾಗಿ ಸಂಬಂಧ ಹೊಂದಿರುವ ವ್ಯಕ್ತಿಯನ್ನು ನೇಮಿಸಿ ಎಂದು ಸಲಹೆ ನೀಡಿದ್ದಾಗಿ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.
Advertisement
Advertisement
ಆರ್‌ಎಸ್‌ಎಸ್ ನೀಡಿದ ಪಟ್ಟಿಯಲ್ಲಿ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ, ಮಂಗಳೂರಿನ ಸಂಸದ ನಳೀನ್ ಕುಮಾರ್ ಕಟೀಲ್ ಹೆಸರಿದೆ. ಈ ಸಲಹೆಯನ್ನು ಅಮಿತ್ ಶಾ ಒಪ್ಪಿದ್ದಾರೆ ಎನ್ನಲಾಗಿದ್ದು, ರಾಜ್ಯದಲ್ಲಿ ಏನೇ ಬದಲಾವಣೆ ಇದ್ದರೂ ಅದು ಲೋಕಸಭಾ ಚುನಾವಣೆಯ ನಂತರವೇ ಎಂದು ಉತ್ತರಿಸಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೂರು ಮಂತ್ರವನ್ನು ಜಪಿಸಿ `ಲೋಕ’ ಗೆಲ್ಲಿ: ಅಮಿತ್ ಶಾಗೆ ಆರ್‌ಎಸ್‌ಎಸ್ ಮುಖಂಡರಿಂದ ಸಲಹೆ
Advertisement
ಒಂದು ವಾರದಿಂದ ನಡೆಯುತ್ತಿರುವ ಆರ್‌ಎಸ್‌ಎಸ್ ಬೈಠಕ್ ಶುಕ್ರವಾರ ಕೊನೆಗೊಳ್ಳಲಿದ್ದು ಬುಧವಾರ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಪಾಲ್ಗೊಂಡಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ರಾಮಮಂದಿರ ನಿರ್ಮಾಣದ ಬಗ್ಗೆ ಕೇಂದ್ರ ಸರಕಾರ ಸುಗ್ರೀವಾಜ್ಞೆ ತರಬೇಕೆಂದು ಆರ್‌ಎಸ್‌ಎಸ್ ನಾಯಕರು ಆಗ್ರಹಿಸಿದ ಹಿನ್ನೆಲೆಯಲ್ಲಿ ತಡರಾತ್ರಿಯವರೆಗೆ ನಾಯಕರ ಅಭಿಪ್ರಾಯವನ್ನು ಶಾ ಆಲಿಸಿದ್ದಾರೆ. ಸಭೆಯಲ್ಲಿ ರಾಮಮಂದಿರ ಬಗ್ಗೆ ನಿರ್ಣಯ ಕೈಗೊಳ್ಳುವಂತೆ ಸೂಚಿಸಲಾಗಿದೆ ಎನ್ನಲಾಗುತ್ತಿದೆ. ಜೊತೆಗೆ ಶಬರಿಮಲೆ ವಿವಾದವೂ ಪ್ರಸ್ತಾಪಗೊಂಡಿದ್ದು, ಬಿಜೆಪಿ ವರಿಷ್ಠರ ಗಮನ ಸೆಳೆಯಲಾಗಿದೆ.
Advertisement
ಕ್ಷೇತ್ರದ ಪರಂಪರೆಗೆ ಧಕ್ಕೆಯಾಗದಂತೆ ಭಕ್ತರ ಸಂಘರ್ಷವನ್ನು ತಪ್ಪಿಸಲು ಬಿಜೆಪಿಯಿಂದ ಪ್ರಯತ್ನ ನಡೆಸುವಂತೆ ಸೂಚನೆ ನೀಡಲಾಗಿದೆ. ಸಭೆ ಬಳಿಕ ಹೊರಟ ಅಮಿತ್ ಶಾ ಓಷಿಯನ್ ಪರ್ಲ್ ಹೊಟೇಲ್‍ನಲ್ಲಿ ತಡರಾತ್ರಿಯವರೆಗೂ ಬಿಜೆಪಿ ನಾಯಕರೊಂದಿಗೆ ಸಣ್ಣ ಮಟ್ಟಿನ ಸಭೆ ನಡೆಸಿದ್ದಾರೆ. ಗುರುವಾರ ಬೆಳಗ್ಗೆ 9.15ಕ್ಕೆ ವಿಶೇಷ ವಿಮಾನದ ಮೂಲಕ ಅಮಿತ್ ಶಾ ದೆಹಲಿಗೆ ಪ್ರಯಾಣಿಸಿದ್ದಾರೆ.
ಸತತ ನಾಲ್ಕು ಗಂಟೆಗಳ ಕಾಲ ಆರ್‌ಎಸ್‌ಎಸ್ ಮುಖಂಡರ ಜತೆ ಅಮಿತ್ ಶಾ ಚರ್ಚೆ ನಡೆಸಿದ್ದಾರೆ. ಸುರೇಶ್ ಭಯ್ಯಾಜಿ ಜೋಶಿ, ಮುಕುಂದ್ ಜೀ, ಸಂತೋಷ್ ಜೀ ಸೇರಿದಂತೆ ಕೇರಳ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕ ಆರ್‌ಎಸ್‌ಎಸ್ ಪ್ರಮುಖರ, ಸಂಘಟನಾ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews