ನವದೆಹಲಿ: ಸಂಸತ್ ಅಧಿವೇಶನದಲ್ಲಿ ರಾಜ್ಯಸಭೆಯು ಸೋಮವಾರ (ಡಿ.11) ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಎರಡು ಮಸೂದೆಗಳನ್ನು ಅಂಗೀಕರಿಸಿತು. ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) (J&K Reservation) ಮಸೂದೆ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) (Reorganisation) ಮಸೂದೆಯನ್ನು ರಾಜ್ಯಸಭೆಯು ಧ್ವನಿ ಮತದ ಮೂಲಕ ಅಂಗೀಕರಿಸಿತು.
Advertisement
ಇದೇ ತಿಂಗಳ ಡಿಸೆಂಬರ್ 6 ರಂದು ಲೋಕಸಭೆಯಲ್ಲಿ ಈ ಎರಡು ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಸೋಮವಾರ ಜಮ್ಮು ಮತ್ತು ಕಾಶ್ಮೀರಕ್ಕೆ (Jammu And Kashmir) ಸಂವಿಧಾನದ 370ನೇ ವಿಧಿಯ (Article 370) ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲೂ ಈ ಎರಡೂ ಮಸೂದೆಗಳನ್ನು ಅಂಗೀಕರಿಸಲಾಯಿತು. ಇದನ್ನೂ ಓದಿ: 3,500 ಕಿ.ಮೀ ದೂರದ ಥೈಲ್ಯಾಂಡ್‌ನಿಂದ ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ವಿಶೇಷ ಮಣ್ಣು
Advertisement
Advertisement
ಈ ಸಂಬಂಧ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾ (Amit Shah), ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಯೋತ್ಪಾದನೆಯಿಂದ ಮುಕ್ತವಾಗಿರುವ ಹಾಗೂ ಅಭಿವೃದ್ಧಿ ಹೊಂದಿದ ಕಾಶ್ಮೀರವನ್ನು ದೇಶಕ್ಕೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ
Advertisement
ಈ ಎರಡು ಮಸೂದೆಗಳಿಂದ ಕಳೆದ 75 ವರ್ಷಗಳಿಂದ ತಮ್ಮ ಮೂಲಭೂತ ಹಕ್ಕುಗಳಿಂದ ವಂಚಿರಾಗಿದ್ದವರಿಗೆ ನ್ಯಾಯ ಸಿಗುತ್ತದೆ. ಈ ಮೀಸಲಾಯಿತು ಧ್ವನಿಯಾಗುತ್ತದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: Article 370 Verdict – ಕೇಂದ್ರದ ಎಲ್ಲಾ ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ಸುಪ್ರೀಂ ಐತಿಹಾಸಿಕ ತೀರ್ಪಿನಲ್ಲಿ ಏನಿದೆ?