ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election) ಬಳಿಕ ಕರ್ನಾಟಕ ಸರ್ಕಾರ (Karnataka Government) ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ (Eknath Shinde) ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್( MB Patil) ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸೋಮವಾರ ಈ ಬಗ್ಗೆ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರು ಇಲ್ಲಿ ಉತ್ತರಿಸಿದರು.
Advertisement
Advertisement
ಲೋಕಸಭಾ ಚುನಾವಣೆ (Lok Sabha Election) ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರ್ಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ. ಜೂನ್ ಮೊದಲ ವಾರದ ನಂತರ ಶಿಂಧೆ ಅವರ ಸರ್ಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.
Advertisement
ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು ಅವರು ವಿವರಿಸಿದರು. ಇದನ್ನೂ ಓದಿ: Exclusive: ಕರ್ನಾಟಕದಲ್ಲಿ ‘ಆಪರೇಷನ್ ನಾಥ’ ಸುಳಿವು ಕೊಟ್ಟ ಏಕನಾಥ ಶಿಂಧೆ!
Advertisement
ಏಕನಾಥ ಶಿಂಧೆಗೆ ಶಕ್ತಿ ಇದ್ದರೆ ನಮ್ಮ ಐದು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ. ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರ್ಕಾರ ಬರಲಿದೆ ಎಂದು ಪಾಟೀಲ್ ಹೇಳಿದರು.