ನವದೆಹಲಿ: ಪೆಟ್ರೋಲ್, ಡೀಸೆಲ್, ಗೃಹ ಬಳಕೆಯ ಎಲ್‌ಪಿಜಿ ದರ ಏರಿಕೆ ಬೆನ್ನಲ್ಲೇ ಸಿಎನ್‌ಜಿ ಮತ್ತು ಕೊಳವೆ ಮೂಲಕ ಮನೆಗಳಿಗೆ ಪೂರೈಕೆಯಾಗುವ ಅಡುಗೆ ಅನಿಲ (ಪಿಎನ್‌ಜಿ) ದರದಲ್ಲೂ ಏರಿಕೆ ಮಾಡಲಾಗಿದೆ. ಇದರಿಂದ ಜನರಿಗೆ ಬೆಲೆ ಏರಿಕೆಯ ಬಿಸಿ ಮತ್ತಷ್ಟು ತಟ್ಟಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಿಎನ್‌ಜಿ ದರ ಪ್ರತಿ ಕೆ.ಜಿ.ಗೆ 1 ರೂ. ಹೆಚ್ಚಳವಾಗಿದೆ. ದೆಹಲಿಯಲ್ಲಿ ಸಿಎನ್‌ಜಿ ಬೆಲೆಯನ್ನು 58.01 ರಿಂದ 59.01 ಕ್ಕೆ ಹೆಚ್ಚಿಸಲಾಗಿದೆ ಎಂದು ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್‌ನ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಬಸ್ಸಿನಲ್ಲೇ ಎಣ್ಣೆ ಹೊಡೆದ ಶಾಲಾ ಹೆಣ್ಮಕ್ಳು: ವಿಡಿಯೋ ವೈರಲ್
ಅಡುಗೆ ಉದ್ದೇಶಗಳಿಗಾಗಿ ಕುಟುಂಬಗಳು ಪಡೆಯುವ ಪ್ರತಿ ಕ್ಯೂಬಿಕ್ ಮೀಟರ್ ಪಿಎನ್‌ಜಿ ದರ 36.61 ರೂಪಾಯಿ ತಲುಪಿದೆ. ಕಳೆದ ಎರಡು ದಿನಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ ತಲಾ 1.60 ರೂಪಾಯಿಯಷ್ಟು ಏರಿಕೆಯಾಗಿದೆ. ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ದರ 50 ರೂಪಾಯಿ ಹೆಚ್ಚಳವಾಗಿದೆ.
ಜಾಗತಿಕವಾಗಿ ನೈಸರ್ಗಿಕ ಅನಿಲ ದರದಲ್ಲಿ ಏರಿಕೆಯಾಗಿರುವುದರಿಂದ ಈ ತಿಂಗಳು ಮೂರನೇ ಬಾರಿಗೆ ಸಿಎನ್‌ಜಿ ದರ ಹೆಚ್ಚಳ ಕಂಡಿದೆ. ಕಳೆದ ಎರಡು ಬಾರಿಯ ದರ ಏರಿಕೆಯಲ್ಲಿ ಪ್ರತಿ ಕೆಜಿ ಸಿಎನ್‌ಜಿಗೆ ಒಟ್ಟು 50 ಪೈಸೆ ಹೆಚ್ಚಳವಾಗಿದೆ. ಈ ವರ್ಷ ಪ್ರತಿ ಕೆ.ಜಿ.ಗೆ ಒಟ್ಟು 5.50ರಷ್ಟು ಏರಿಕೆಯಾಗಿದೆ. ಇದನ್ನೂ ಓದಿ: ಅಲ್ಪಸಂಖ್ಯಾತರ ಶಾದಿ ಮಹಲ್ ಯೋಜನೆ ರದ್ದು: ಬೊಮ್ಮಾಯಿ
ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಬೆಲೆ ಏರಿಕೆಯ ವಿಷಯ ಸದ್ದು ಮಾಡಿತ್ತು. ಅಧಿಕ ಹಣದುಬ್ಬರ ಮತ್ತು ಸರಕುಗಳ ಬೆಲೆ ಏರಿಕೆಯ ಮೂಲಕ ಸಾಮಾನ್ಯ ಜನರಿಗೆ ಹೆಚ್ಚಿನ ಹೊರೆ ಹೊರಿಸಲಾಗಿದೆ ಎಂದು ಪ್ರತಿಪಕ್ಷಗಳು ಪ್ರತಿಭಟಿಸಿದವು. ಇದನ್ನೂ ಓದಿ: ನನಗೆ ವಯಸ್ಸಾಯ್ತು ಅಂತ ಕಾಲೆಳೆಯುತ್ತಾರೆ ಅದಕ್ಕೆ ವಾರಕ್ಕೊಮ್ಮೆ ಶೇವ್ ಮಾಡಿಸ್ತೀನಿ: ಸಿದ್ದರಾಮಯ್ಯ