ನವದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್ (Satyendar Jain) ಮತ್ತು ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ರಾಜೀನಾಮೆಯಿಂದ ತೆರವಾದ 2 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ನಿರ್ಧರಿಸಿದ್ದು, ಶಾಸಕರಾದ ಸೌರಭ್ ಭಾರದ್ವಾಜ್ (Saurabh Bhardwaj) ಮತ್ತು ಅತಿಶಿ (Atishi) ಹೆಸರನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೆನಾ ಅನುಮತಿಗಾಗಿ ಕಳುಹಿಸಿದೆ.
ಹೊಸ ಮದ್ಯ ನೀತಿಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಆರೋಪದಲ್ಲಿ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ರಾಜೀನಾಮೆ ನೀಡಿದ್ದರು. ರಾಜೀನಾಮೆ ಅಂಗೀಕರಿಸಿ ಲೆಫ್ಟಿನೆಂಟ್ ಗವರ್ನರ್ ಮಾಹಿತಿ ನೀಡಿದ್ದ ಕೇಜ್ರಿವಾಲ್ ಹೊಸ ಹೆಸರುಗಳನ್ನು ಕಳುಹಿಸಿಕೊಟ್ಟಿದ್ದಾರೆ.
Advertisement
Advertisement
ಮನೀಶ್ ಸಿಸೋಡಿಯಾ ಡಿಸಿಎಂ ಮಾತ್ರವಲ್ಲದೇ ಶಿಕ್ಷಣ, ಹಣಕಾಸು, ಯೋಜನೆ, ಭೂಮಿ ಮತ್ತು ಕಟ್ಟಡ, ಸೇವೆಗಳು, ಪ್ರವಾಸೋದ್ಯಮ, ಕಲೆ-ಸಂಸ್ಕೃತಿ ಮತ್ತು ಭಾಷೆ, ಕಾರ್ಮಿಕ ಮತ್ತು ಉದ್ಯೋಗ, ಆರೋಗ್ಯ, ಕೈಗಾರಿಕೆ, ವಿದ್ಯುತ್, ಗೃಹ, ನಗರಾಭಿವೃದ್ಧಿ, ನೀರಾವರಿ, ಲೋಕೋಪಯೋಗಿ ಸೇರಿ 18 ಇಲಾಖೆಗಳನ್ನು ನಿಭಾಯಿಸುತ್ತಿದ್ದರು. ಸತ್ಯೇಂದ್ರ ಜೈನ್ ಆರೋಗ್ಯ, ಗೃಹ, ಕೈಗಾರಿಕೆ ಸೇರಿದಂತೆ 7 ಖಾತೆಗಳನ್ನು ನಿರ್ವಹಿಸುತ್ತಿದ್ದರು. ಇಬ್ಬರ ರಾಜೀನಾಮೆ ಬಳಿಕ ಖಾತೆಗಳನ್ನು ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಮತ್ತು ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ನಡುವೆ ಹಂಚಿಕೆ ಮಾಡಿದೆ. ಇದನ್ನೂ ಓದಿ: ಬಿಜೆಪಿ ಮಾಡದಿದ್ರೆ, ನಾವು ಅಧಿಕಾರಕ್ಕೆ ಬಂದ್ಮೇಲೆ 7ನೇ ವೇತನ ಆಯೋಗ ಜಾರಿ ಮಾಡ್ತೀವಿ: ಸಿದ್ದರಾಮಯ್ಯ
Advertisement
Delhi Chief Minister Arvind Kejriwal sent names of AAP MLAs Saurabh Bhardwaj and Atishi to Delhi LG to be elevated as ministers in the cabinet: Sources pic.twitter.com/IqemD3j19W
— ANI (@ANI) March 1, 2023
Advertisement
3 ಬಾರಿ ಶಾಸಕರಾಗಿರುವ ಮತ್ತು ಪ್ರಸ್ತುತ ದೆಹಲಿ ಜಲ ಮಂಡಳಿಯ ಉಪಾಧ್ಯಕ್ಷ ಹುದ್ದೆಯನ್ನು ಹೊಂದಿರುವ ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಮತ್ತು ಮನೀಶ್ ಸಿಸೋಡಿಯಾ ಜೊತೆಗೆ ಕಾರ್ಯ ನಿರ್ವಹಿಸಿದ ಕಾಲ್ಕಾಜಿ ಶಾಸಕಿ ಅತಿಶಿ ಅವರಿಗೆ ರಾಜ್ಯ ಖಾತೆ ನೀಡಲು ನಿರ್ಧರಿಸಿದ್ದು, ಲೆಫ್ಟಿನೆಂಟ್ ಗವರ್ನರ್ ಅನುಮತಿ ಮಾತ್ರ ಬಾಕಿ ಉಳಿದಿದೆ. ಇದನ್ನೂ ಓದಿ: ಏಪ್ರಿಲ್ 1 ರಿಂದಲೇ ವೇತನ ಹೆಚ್ಚಳ ಜಾರಿಗೆ- ಸರ್ಕಾರದಿಂದ ಅಧಿಕೃತ ಆದೇಶ