4 ರಾಜ್ಯಗಳಲ್ಲಿ ಬಿಜೆಪಿ ವಿಜಯ – ಗುಜರಾತ್‍ನಲ್ಲಿ ಮೋದಿ ಭರ್ಜರಿ ರೋಡ್ ಶೋ

Public TV
2 Min Read
modi 3

ಗಾಂಧೀನಗರ: ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬೆನ್ನೆಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಗುಜರಾತ್ ಚುನಾವಣೆಯತ್ತ ಗಮನ ಹರಿಸಿದ್ದು, ಅಹಮದಾಬಾದ್‍ನಲ್ಲಿ ಇಂದು ರೋಡ್ ಶೋ ನಡೆಸಿದರು.

modi 2 1

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗಾಂಧಿನಗರದಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೂ ಹೂವಿನಿಂದ ಅಲಂಕರಿಸಲ್ಪಟ್ಟ ತೆರೆದ ಕಾರಿನಲ್ಲಿ ಮೋದಿ ಅವರು ರೋಡ್ ನಡೆಸಿದರು. ಈ ನಡುವೆ ರಸ್ತೆಯ ಬದಿಗಳಲ್ಲಿ ಮೋದಿ ಅವರನ್ನು ನೋಡಲು ಮುಗಿಬಿದ್ದಿದ್ದ ಜನರತ್ತ ಮೋದಿ ಕೈ ಬೀಸಿದರು. ಜೊತೆಗೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀ ರಾಮ್ ಮತ್ತು ಭಾರತ್ ಮಾತಾ ಕೀ ಜೈ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು.

ವಿಮಾನ ನಿಲ್ದಾಣದಿಂದ ಬಿಜೆಪಿ ಕಚೇರಿ ಸುಮಾರು 10ಕಿ.ಮೀ.ವರೆಗೂ ಇದ್ದು, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ರೋಡ್ ಶೋ ವೇಳೆ ಮೋದಿ ಅವರಿಗೆ ಸಾಥ್ ನೀಡಿದರು. ಇದನ್ನೂ ಓದಿ: EVMಗಳಲ್ಲಿ ಸಮಸ್ಯೆಯಿಲ್ಲ, ಜನರ ತಲೆಯೊಳಗಿನ ಚಿಪ್ಪಿನಲ್ಲಿ ಸಮಸ್ಯೆಯಿದೆ: ಫಲಿತಾಂಶದ ಬಗ್ಗೆ ಓವೈಸಿ ಪ್ರತಿಕ್ರಿಯೆ

ಮೋದಿ ಅವರು ಗುಜರಾತ್‍ಗೆ ಎರಡು ದಿನಗಳ ಕಾಲ ಆಗಮಿಸಿದ್ದು, ಪಂಚಾಯತ್ ಸಂಸ್ಥೆಗಳ ಒಂದು ಲಕ್ಷಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನದ ಬಳಿಕ ಮೋದಿ ಅವರು ತಮ್ಮ ತವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಗುಜರಾತ್ ಚುನಾವಣೆ ನಡೆಯಲಿದೆ. ಇದನ್ನೂ ಓದಿ: BJPಯ ಬಡವರ ಪರ, ಸಕ್ರಿಯ ಆಡಳಿತಕ್ಕೆ ಜನರ ಬೆಂಬಲ ಅನ್ನೋದು ಫಲಿತಾಂಶದಿಂದ ಸಾಬೀತು: ಮೋದಿ

Share This Article
Leave a Comment

Leave a Reply

Your email address will not be published. Required fields are marked *