ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಆಯ್ತು ಈಗ ಮಂಡ್ಯ ಬಿಜೆಪಿ ಮುಖಂಡರು ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಮುಖಂಡರು ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ್ದಾರೆ. ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ, ಶಿವಕುಮಾರ್ ಆರಾಧ್ಯ ಸೇರಿದಂತೆ ಇತರರು ಸುಮಾರು ಎಂಟು ಜನ ಪೌರಕಾರ್ಮಿಕರ ಪಾದ ತೊಳೆದು ಪೂಜೆ ಸಲ್ಲಿಸಿದ್ದಾರೆ. ಮಂಡ್ಯದ ಶಕ್ತಿ ದೇವತೆ ಕಾಳಿಕಾಂಬಾ ದೇವಾಲಯದ ಆವರಣದಲ್ಲಿ ಈ ಪಾದ ಪೂಜೆ ನಡೆದಿದೆ. ಪಾದ ಪೂಜೆ ಬಳಿಕ ಪೌರ ಕಾರ್ಮಿಕರಿಗೆ ವಸ್ತ್ರ ಮತ್ತು ಹಣ್ಣು ಹಂಪಲು ವಿತರಣೆ ಮಾಡಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಪೌರಕಾರ್ಮಿಕರ ಪಾದಪೂಜೆ – ವಿಡಿಯೋ ನೋಡಿ
Advertisement
Advertisement
ಭಾನುವಾರ ಪ್ರಧಾನಿ ಮೋದಿ ಉತ್ತರಪ್ರದೇಶದ ಪ್ರಯಾಗ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗಿದ್ದರು. ಹಣೆಗೆ ವಿಭೂತಿ ಹಚ್ಚಿಕೊಂಡು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 5 ಜನ ಪೌರಕಾರ್ಮಿಕರ ಪಾದಕ್ಕೆ ನೀರು ಹಾಕಿ ತೊಳೆದು, ಕರವಸ್ತ್ರದಿಂದ ಸ್ವಚ್ಛಗೊಳಿಸಿದ್ದರು. ಪಾದಪೂಜೆಯ ಬಳಿಕ ಅವರಿಗೆ ಶಾಲು ಹೊದಿಸಿ ಕೈಮುಗಿದು ಧನ್ಯವಾದ ತಿಳಿಸಿದ್ದರು. ಪಾದಪೂಜೆ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ತ್ರಿವೇಣಿ ಸಂಗಮಕ್ಕೆ ತೆರಳಿ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ಬಳಿಕ ಸ್ವಚ್ಛ ಕುಂಭ್ – ಸ್ವಚ್ಛ ಆಭಾರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Advertisement
#WATCH: Prime Minister Narendra Modi washes feet of sanitation workers in Prayagraj pic.twitter.com/otTUJpqynU
— ANI UP/Uttarakhand (@ANINewsUP) February 24, 2019
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv