ತಿರುವನಂತಪುರ: ಬಿಜೆಪಿ ಮುಖಂಡರೊಬ್ಬರನ್ನು ಅವರ ಮನೆಯಲ್ಲಿ ದುಷ್ಕರ್ಮಿಗಳು ಹತ್ಯೆ ಗೈದಿರುವ ಘಟನೆ ಕೇರಳದ ಅಲಪ್ಪುಳದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬಿಜೆಪಿಯ ಮೋರ್ಚಾ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ರಂಜಿತ್ ಶ್ರೀನಿವಾಸನ್ ಅವರ ಮನೆಗೆ ನುಗ್ಗಿದ ಗುಂಪೊಂದು ಅವರ ಕತ್ತು ಸೀಳಿ ಕೊಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರುವುದಿಲ್ಲ: ಓವೈಸಿ
Advertisement
Advertisement
ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಅವರ ಮೇಲೆ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್‍ವೊಂದು ದಾಳಿ ನಡೆಸಿತ್ತು. ಇದಾದ ಒಂದು ದಿನದ ನಂತರ ರಂಜಿತ್ ಶ್ರೀನಿವಾಸನ್ ಅವರ ಹತ್ಯೆ ಮಾಡಲಾಗಿದೆ.
Advertisement
Advertisement
ಕೆ.ಎಸ್. ಶಾನ್ ಮನೆಗೆ ತೆರಳುತ್ತಿದ್ದ ವೇಳೆ ಅವರ ಬೈಕ್‍ಗೆ ಕಾರೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಅವರಿಗೆ 40ಕ್ಕೂ ಹೆಚ್ಚು ಗಾಯಗಳಾಗಿದ್ದು, ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಅಮೃತಸಾರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ – ಕೋಪ್ರೋದ್ರಿಕ್ತ ಗುಂಪಿನಿಂದ ಹತ್ಯೆ
ಈ ಘಟನೆ ಕುರಿತಂತೆ ಎಸ್‍ಡಿಪಿಐ ಅಧ್ಯಕ್ಷ ಎಂ.ಕೆ.ಫೈಝಿ ಅವರು, ಕೆ.ಎಸ್.ಶಾನ್ ರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‍ಎಸ್‍ಎಸ್) ಸದಸ್ಯರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.