ಕಲಬುರಗಿ: ಡಿಸಿಎಂ ಪರಮೇಶ್ವರ್ ನಂತರ ಇದೀಗ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹ ಝೀರೋ ಟ್ರಾಫಿಕ್ ನಲ್ಲಿ ಸಂಚರಿಸಿದ್ದಾರೆ.
ಇಂದು ಕಲಬುರಗಿ ವಿಮಾನ ನಿಲ್ದಾಣದಿಂದ ಮಹಾರಾಷ್ಟ್ರದ ಲಾತೂರ್ ಗೆ ಚುನಾವಣಾ ಪ್ರಚಾರಕ್ಕೆ ಹೋಗುತ್ತಿದ್ದರು. ಈ ಹಿನ್ನಲೆ ಐವಾನ್ ಶಾಹಿ ಬಡಾವಣೆಯ ಅವರ ಸ್ವಗೃಹದಿಂದ ಕಲಬುರಗಿ ವಿಮಾನ ನಿಲ್ದಾಣದವರೆಗೆ ಝೀರೋ ಟ್ರಾಫಿಕ್ ನೀಡಲಾಗಿತ್ತು. ಇದನ್ನೂ ಓದಿ: ಡಿಸಿಎಂ ಪರಮೇಶ್ವರ್ ದಾದಾಗಿರಿ – ಮಳೆಯ ನಡುವೆಯೂ ಝಿರೋ ಟ್ರಾಫಿಕ್‍ನಲ್ಲಿ ಸಂಚಾರ!
Advertisement
Advertisement
ಖರ್ಗೆ ಝೀರೋ ಟ್ರಾಫಿಕ್ ಬಳಿಸಿದ ಪರಿಣಾಮ ಆ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಯಿತು. ಅಷ್ಟಕ್ಕೂ ಖರ್ಗೆ ಅವರಿಗೇ ಝೀರೋ ಟ್ರಾಫಿಕ್ ಅವಶ್ಯಕತೆಯಿತ್ತಾ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಇರುವ ಅವಕಾಶ ಬಳಸಿಕೊಳ್ತಿದ್ದೇನೆ, ನಿಮಗೆ ಹೊಟ್ಟೆ ಉರಿ: ಝಿರೋ ಟ್ರಾಫಿಕ್‍ಗೆ ಡಿಸಿಎಂ ಸಮರ್ಥನೆ
Advertisement
ಉಪಮುಖ್ಯಮಂತ್ರಿ ಪರಮೇಶ್ವರ್ ಝೀರೋ ಟ್ರಾಫಿಕ್ ಬಳಸಿ ಸುದ್ದಿಯಾಗಿದ್ದರು. ಝೀರೋ ಟ್ರಾಫಿಕ್ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಗಣ್ಯವ್ಯಕ್ತಿ, ರಾಜ್ಯಪಾಲರು ಹಾಗೂ ಗೃಹ ಸಚಿವರಿಗೂ ಸಹ ಝೀರೋ ಟ್ರಾಫಿಕ್ ಅವಕಾಶ ನೀಡಲಾಗಿದೆ. ಹೀಗಾಗಿ ಇದನ್ನು ನಾನು ಬಳಸಿಕೊಳ್ಳುತ್ತಿದ್ದೇನೆ. ಝೀರೋ ಟ್ರಾಫಿಕ್ ಅಗತ್ಯ ಇದೆ ಎನ್ನುವುದರಿಂದ ಅವಕಾಶ ನೀಡಲಾಗಿದೆ. ಈ ಹಿಂದಿನ ಗೃಹ ಸಚಿವರು ಬೇಡ ಎಂದಿದ್ದರು. ಹಾಗಂತ ನಾನು ಸಹ ಬೇಡ ಎನ್ನಬೇಕಿಲ್ಲ. ನನಗೆ ಇರುವ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ. ನಾನು ಝೀರೋ ಟ್ರಾಫಿಕ್ ತೆಗೆದುಕೊಳ್ಳುವುದು ಮಾಧ್ಯಮಗಳಿಗೆ ಹೊಟ್ಟೆ ಉರಿ ಎನ್ನುವ ಮೂಲಕ ತಮ್ಮ ಅಧಿಕಾರದ ದರ್ಪ ತೋರಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv