ಮಂಡ್ಯ: ಬಸ್ ಪ್ರಯಾಣದ ದರ ಹೆಚ್ಚಿಸುವ ಕುರಿತು ಈ ಹಿಂದೆ ಸುಳಿವು ನೀಡಿದ್ದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು, ಮುಂದಿನ ವಾರದಲ್ಲಿಯೇ ದರ ಏರಿಕೆಯಾಗಲಿದೆ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡುತ್ತಿದೆ. ಇದರಿಂದಾಗಿಯೇ ಬಸ್ ಪ್ರಯಾಣದ ದರ ಏರಿಕೆ ಮಾಡಲಾಗುತ್ತಿದೆ ಎಂದ ಅವರು, ಸಾರಿಗೆ ಇಲಾಖೆ ನಷ್ಟದಲ್ಲಿದ್ದು, ವೆಚ್ಚವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸದ್ಯದಲ್ಲಿಯೇ ಬಸ್ ಪ್ರಯಾಣ ದರ ಏರಿಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
Advertisement
Advertisement
ನಾನು ಅಧಿಕಾರಕ್ಕೆ ಬಂದ ತಕ್ಷಣವೇ ಬಸ್ ಪ್ರಯಾಣದ ದರ ಏರಿಕೆಗೆ ಪ್ರಸ್ತಾಪ ಸಲ್ಲಿಕೆಯಾಗಿತ್ತು. ಆದರೆ ನಾನು ಅದನ್ನು ತಡೆಹಿಡಿದಿದ್ದೆ. ಈಗ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗುತ್ತಿದೆ. ಹೀಗಾಗಿ ಈ ಹಿಂದೆ ಅಧಿಕಾರಿಗಳು ಸಲ್ಲಿಸಿರುವ ಬಸ್ ಪ್ರಯಾಣದ ದರದ ಆಧಾರದ ಮೇಲೆ ದರವನ್ನು ಹೆಚ್ಚಿಸಲಾಗುತ್ತದೆ ಎಂದು ತಿಳಿಸಿದರು.
Advertisement
ಪ್ರಯಾಣದ ದರ ಹೆಚ್ಚಾದರೆ ಪ್ರಯಾಣಿಕರಿಗೆ ಹೊರೆಯಾಗುವುದಿಲ್ಲವೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಪೆಟ್ರೋಲ್ ಹಾಗೂ ಡೀಸೆಲ್‍ಗೆ ಹೆಚ್ಚು ಹಣ ಪಾವತಿಸಿ ಖರೀದಿಸುತ್ತಿದ್ದಾರೆ. ಇದು ಅವರಿಗೆ ಹೊರೆ ಆಗುತ್ತಿಲ್ಲವೇ? ಹಾಗೇ ಬಸ್ ಪ್ರಯಾಣದ ದರ ಏರಿಕೆಯಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರು.
Advertisement
ಇನ್ನು ಭಾರತ್ ಬಂದ್ ಬೆಂಬಲ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಬಂದ್‍ಗೆ ಜೆಡಿಎಸ್ ಪಕ್ಷದಿಂದ ಬೆಂಬಲ ನೀಡಿದ್ದೇವೆ. ಪಕ್ಷದ ಕಾರ್ಯಕರ್ತರು ಕೂಡ ಬಂದ್ ಅನ್ನು ಬೆಂಬಲಿಸುತ್ತಾರೆ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv