ಮಂಗಳೂರು: ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು. ಈಗ ಅವರು ಭೂಮಿ ಮೇಲೆ ಇದ್ದಾರಾ ಯಾರಿಗಾದ್ರು ಗೊತ್ತಾ? ಯಾಕಂದ್ರೆ ಅವರ ಊರಿನಲ್ಲೇ ಒಂದು ಕೊಲೆಯಾಗಿದೆ. ಈ ಬಗ್ಗೆ ತಿಳಿಸಬೇಕಿತ್ತು ಅವರ ಫೋನ್ ನಂಬರ್ ಯಾರಲ್ಲಾದರೂ ಇದ್ರೆ ಕೊಡಿ, ನಾನಾದರು ಫೋನ್ ಮಾಡಿ ಹೇಳುತ್ತೇನೆ ಎನ್ನುವ ಆಕ್ರೋಶದ ಪೋಸ್ಟರ್‌ಗಳು ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮಾಜಿ ಸಿಎಂ ಸದಾನಂದ ಗೌಡರ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪೋಸ್ಟರ್‌ನಲ್ಲಿ ಏನಿದೆ?:
ಅವರ ಬಗ್ಗೆ ನಿಮಗೆ ಈಗ ಮರೆತಿರಬಹುದು. ಅವರು ಒಂದು ಕಾಲದ ಮಹಾನ್ ಹೋರಾಟಗಾರ, ಪುತ್ತೂರಿನಲ್ಲಿ ತನ್ನ ಜಾಥಾದ ಮೂಲಕವೇ ಬಿಜೆಪಿ ಪಕ್ಷದಲ್ಲಿ ಮುಂಚೂಣಿಯಾಗಿ ಕಾಣಿಸಿಕೊಂಡ ವ್ಯಕ್ತಿ. ಹುಟ್ಟೂರು ಸುಳ್ಯದ ಮಂಡೆಕೋಲು ಗ್ರಾಮಸ್ಥ, ಮಡಿಕೇರಿಯ ಕಡೆಯಿಂದ ಮದುವೆಯಾದ ಗೃಹಸ್ಥ. ಇದನ್ನೂ ಓದಿ: ಆರಗ ಮನೆಗೆ ನುಗ್ಗಿದ ABVP ಕಾರ್ಯಕರ್ತರಿಗೆ ಲಾಠಿ ಏಟು
ಗೊತ್ತಾಗಿಲ್ಲಾ, ಪರ್ವಾಗಿಲ್ಲ. ಇನ್ನೊಂದು ಸುಳಿವು ನಿಮಗೆ ಕೊಡುತ್ತೇವೆ. ಈ ಸುಳಿವು ಮಾತ್ರ ಖಂಡಿತಾ ಆತ ಯಾರೆಂದು ನಿಮಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ, ಜೊತೆಗೇ ದೇಶಕ್ಕೆ ಅವರ ವ್ಯಕ್ತಿತ್ವವನ್ನು ಜನರ ಮುಂದು ಇಟ್ಟು, ಬಿಡಿಸಿ, ಅವರ ವ್ಯಕ್ತಿತ್ವದ ಘನತೆಯನ್ನು ತೆರೆದುಬಿಡುತ್ತದೆ ಎಂದು ಬರೆದಿರುವ ಪೋಸ್ಟರ್‌ಗಳು ಕರಾವಳಿಯಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಚುನಾವಣೆ ವರ್ಷ ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ: ಎಚ್‍ಡಿಕೆ
ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಅವರ ಮನೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು, ಶಾಸಕರು ಹಾಗೂ ಕೆಲ ಸಂಘಟನೆಯ ಮುಖ್ಯಸ್ಥರು, ಕಾರ್ಯಕರ್ತರು ಭೇಟಿ ನೀಡಿ ಸಾಂತ್ವನ ಹೇಳಿದ್ದು, ಪರಿಹಾರವನ್ನೂ ನೀಡಿದ್ದಾರೆ. ಆದರೆ ಬೆಳ್ಳಾರೆಯಿಂದ ಕೆಲವೇ ಕಿಲೋ ಮೀಟರ್‌ಗಳ ಅಂತರದ ಊರಿನವರಾದ ಸುಳ್ಯ ತಾಲೂಕಿನ, ಮಂಡೆಕೋಲು ಗ್ರಾಮದ ದೇವರಗುಂಡದ ಸದಾನಂದ ಗೌಡರು ಬಾರದೇ ಇರುವುದು ಮತ ನೀಡಿ ಗೆಲ್ಲಿಸಿದ್ದ ಸ್ಥಳೀಯ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.
ಈಗಾಗಲೇ ಕರಾವಳಿಯಲ್ಲಿ ಕ್ಷೇತ್ರದ ಶಾಸಕರಾದ ಎಸ್. ಅಂಗಾರ ಮತ್ತು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ವಿರುದ್ಧ ತೀವ್ರ ಆಕ್ರೋಶದ ಮಾತುಗಳು ಕೇಳಿಬರುತ್ತಿದೆ. ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಬಳಿಕ ಬೆಳ್ಳಾರೆಗೆ ಅಂತಿಮ ದರ್ಶನಕ್ಕೆ ತೆರಳಿದ ನಳಿನ್ ಕುಮಾರ್ ಕಟೀಲ್ ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ ಸೇರಿದಂತೆ ಇತರ ಸಚಿವರಿಗೆ ಘೇರಾವ್, ಕಾರನ್ನೇ ಪಲ್ಟಿ ಹಾಕುವಷ್ಟರ ಮಟ್ಟಿಗೆ ಕಾರ್ಯಕರ್ತರು ಕುಪಿತಗೊಂಡಿದ್ದರು.