ನವದೆಹಲಿ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಪ್ಪಿಕೊಂಡ ಬಳಿಕ ಈಗ ಕಾಂಗ್ರೆಸ್ ಕಾರ್ಯಕರ್ತರು ಅಪ್ಪುಗೆ ಅಭಿಯಾನವನ್ನು ಆರಂಭಿಸಿದ್ದಾರೆ.
ದೆಹಲಿಯಲ್ಲಿರುವ ಕಾರ್ಯರ್ತರು `ಉಚಿತ ಅಪ್ಪುಗೆ’ ಅಭಿಯಾನವನ್ನು ಆರಂಭಿಸಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟಿಸಿದರು. ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸಿ ಎಂದು ಆಗ್ರಹಿಸಿದರು.
Advertisement
ಶುಕ್ರವಾರ ಅವಿಶ್ವಾಸ ನಿರ್ಣಯ ಚರ್ಚೆಯ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿಯವರನ್ನು ಸೋಲಿಸಲು ನಿಮ್ಮ ಪಕ್ಷದಲ್ಲಿಯೇ ಷಡ್ಯಂತ್ರ ರಚಿತವಾಗಿದೆ. ಬಿಜೆಪಿ, ಆರೆಸ್‍ಎಸ್ ಗಳಿಗೆ ನಾನು ತುಂಬಾ ಆಭಾರಿಯಾಗಿದ್ದೇನೆ. ನನಗೆ ಹಿಂದೂಸ್ತಾನ್, ಭಾರತ, ಹಿಂದೂ, ನನ್ನ ಧರ್ಮದ ಬಗ್ಗೆ ಹೇಳಿಕೊಟ್ಟಿದ್ದೀರಿ. ನಾನು ಈ ವಿಷಯಕ್ಕಾಗಿ ನಿಮಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳುತ್ತಾ ನೇರವಾಗಿ ಮೋದಿಯವರ ಬಳಿ ತೆರಳಿ ಅಪ್ಪಿಕೊಂಡು ಕೈ ಕುಲುಕಿ ಬರುವ ಮೂಲಕ ಲೋಕಸಭೆಯಲ್ಲಿ ಅಚ್ಚರಿ ಮೂಡಿಸಿದ್ದರು.
Advertisement
Delhi: Congress workers organised a 'free hug' campaign at Connaught Place, yesterday. pic.twitter.com/wCLMAdKYLv
— ANI (@ANI) July 25, 2018