ಬೆಂಗಳೂರು: ವೈಯಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಿಂದ ದೂರ ಉಳಿದಿರುವ ಟೀಂ ಇಂಡಿಯಾದ (Team India) ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಮತ್ತೆ ಸುದ್ದಿಯಲ್ಲಿದ್ದಾರೆ.
ವಿರಾಟ್ ಕೊಹ್ಲಿ, ಜನಪ್ರಿಯ ಕ್ರೀಡಾ ಆಕ್ಸೆಸರೀಸ್ ಬ್ರಾಂಡ್ ಪೂಮಾ ಇಂಡಿಯಾದೊಂದಿಗಿನ (Puma India) 8 ವರ್ಷಗಳ ಪಾಲುದಾರಿಕೆ ಕೊನೆಗೊಳಿಸುವ ಸಾಧ್ಯತೆಯಿದೆ. ಬ್ರಾಂಡ್‌ನೊಂದಿಗೆ ಎಂಟು ವರ್ಷಗಳ ಒಡನಾಟದ ನಂತರ ಅವರು ನಿರ್ಗಮಿಸುವುದು ಅನೇಕರಿಗೆ ಅಚ್ಚರಿಯುಂಟುಮಾಡಿದೆ. ಇದನ್ನೂ ಓದಿ: ಶ್ರೀಕೃಷ್ಣ ಪಾಂಡವರಿಗಾಗಿ 5 ಗ್ರಾಮಗಳನ್ನ ಕೇಳಿದ, ನಾವು 3 ಸ್ಥಳ ಕೇಳುತ್ತಿದ್ದೇವೆ – ʻಮಹಾಭಾರತʼದ ಪಾಠ ಹೇಳಿದ ಯೋಗಿ
2017ರಲ್ಲಿ 110 ಕೋಟಿ ರೂ.ಗಳ ಒಪ್ಪಂದದೊಂದಿಗೆ ವಿರಾಟ್ ಕೊಹ್ಲಿಯ ಬ್ರಾಂಡ್‌ನೊಂದಿಗಿನ ಸಂಬಂಧ ಪ್ರಾರಂಭವಾಗಿತ್ತು. ಇದು ಭಾರತೀಯ ಕ್ರೀಡೆಗಳಲ್ಲಿ ಹೆಚ್ಚು ಚರ್ಚೆಗೆ ಒಳಗಾದ ದೊಡ್ಡ ಮೊತ್ತದ ಒಪ್ಪಂದವಾಗಿತ್ತು. ಸದ್ಯ ಕೊಹ್ಲಿ ಈ ಒಪ್ಪಂದವನ್ನು ಕೊನೆಗೊಳಿಸುವ ಸನಿಹದಲ್ಲಿದ್ದಾರೆ. ಇದರಿಂದ 110 ಕೋಟಿ ರೂ. ಕಳೆದುಕೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಬಿಜೆಪಿ ನಾಯಕರ ಹೈಡ್ರಾಮಾ- ಸಿಎಂ, ಸಚಿವರ ಕಚೇರಿಗೆ ಬೀಗ ಹಾಕಲು ಯತ್ನ
ಕ್ರೀಡಾ ಪಾದರಕ್ಷೆಗಳ ತಯಾರಿಕೆಯ ಬ್ರ್ಯಾಂಡ್ ಆಗಿರುವ ಅಗಿಲಿಟಾಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ನ ಅಂಬಾಸಿಡರ್ ಆಗಿ ವಿರಾಟ್ ಕೊಹ್ಲಿ ಹೊಸ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಅಧಿಕೃತ ಹೇಳಿಕೆಗಳನ್ನು ಪೂಮಾ ಮತ್ತು ಅಗಿಲಿಟಾಸ್ ಸ್ಪೋರ್ಟ್ಸ್ ಎರಡೂ ಪ್ರಕಟಿಸಿಲ್ಲ ಎಂದು ವರದಿ ಹೇಳಿದೆ. ಇದನ್ನೂ ಓದಿ: ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು: ಈರಣ್ಣ ಕಡಾಡಿ