ವಿಶ್ರಾಂತಿ ಬಳಿಕ ‘ಬಘೀರ’ ಶೂಟಿಂಗ್ ನಲ್ಲಿ ಭಾಗಿಯಾದ ಶ್ರೀಮುರಳಿ

Public TV
1 Min Read
srimurali

ರೋಬ್ಬರಿ ಮೂರು ತಿಂಗಳು ನಂತರ ಮತ್ತೆ ಬಘೀರ (Bagheera) ಸಿನಿಮಾದ ಶೂಟಿಂಗ್ ಪ್ರಾರಂಭವಾಗಿದೆ. ಚಿತ್ರೀಕರಣದಲ್ಲಿ ಗಾಯಗೊಂಡಿದ್ದ ನಟ ಶ್ರೀಮುರಳಿಗೆ ವೈದ್ಯರು ಮೂರು ತಿಂಗಳ ಕಾಲ ವಿಶ್ರಾಂತಿ ತಗೆದುಕೊಳ್ಳುವಂತೆ ಸೂಚಿಸಿದ್ದರು. ಇದೀಗ ವಿಶ್ರಾಂತಿ ಪಡೆದು ಮತ್ತೆ ಚಿತ್ರೀಕರಣದಲ್ಲಿ (Shooting) ಪಾಲ್ಗೊಂಡಿದ್ದಾರೆ. ಅರ್ಧಕ್ಕೆ ನಿಂತಿದ್ದ ಸಾಹಸ ದೃಶ್ಯದ ಚಿತ್ರೀಕರಣಲ್ಲಿ ಅವರು ಭಾಗಿಯಾಗಿದ್ದಾರೆ.

BAGHEERA

ನಿರ್ದೇಶಕ ಸೂರಿ ಸದ್ಯ ಪ್ರಕಾಶ್ ರೈ (Prakash Rai) ಕಾಣಿಸಿಕೊಳ್ಳುವ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದು, ಈ ದೃಶ್ಯಗಳು ಮುಗಿಯುತ್ತಿದ್ದಂತೆಯೇ ಚಿತ್ರತಂಡ ಮೈಸೂರಿಗೆ ಹಾರಲಿದೆಯಂತೆ. ರೇಸ್ ಕೋರ್ಸ್ ಸೇರಿದಂತೆ ಹಲವು ಸ್ಥಳಗಳಲ್ಲಿ ಚಿತ್ರೀಕರಣ ಮಾಡುವ ಪ್ಲ್ಯಾನ್ ಮಾಡಿದೆಯಂತೆ ಚಿತ್ರತಂಡ. ಈ ಭಾಗದ ಶೂಟಿಂಗ್ ನಲ್ಲೂ ಶ್ರೀಮುರಳಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ:ಸ್ಟಾರ್‌ ನಟರ ಚಿತ್ರಕ್ಕೆ ಶ್ರೀಲೀಲಾನೇ ಬೇಕು- ತೆಲುಗಿನ 9 ಸಿನಿಮಾಗಳಲ್ಲಿ ‘ಕಿಸ್‌’ ನಟಿ ಬ್ಯುಸಿ

Srimurali 1

ಮೂರು ತಿಂಗಳ ಹಿಂದೆ ರಾಕ್‌ಲೈನ್ ಸ್ಟುಡಿಯೋದಲ್ಲಿ (Rockline Studio) ಹೊಂಬಾಳೆ ಸಂಸ್ಥೆ (Hombale Films) ನಿರ್ಮಾಣದ `ಬಘೀರ’ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ (Actor Srimurali) ಗಾಯಗಳಾಗಿದ್ದವು. ಸೂರಿ ನಿರ್ದೇಶನದ ಈ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿತ್ತು. ಇನ್ನೇರೆಡೆ ದಿನಗಳಲ್ಲಿ ಶೂಟಿಂಗ್‌ಗೆ ಬ್ರೇಕ್ ಬೀಳೋದರಲ್ಲಿತ್ತು. ಈ ವೇಳೆ ಶ್ರೀಮುರಳಿಗೆ ಪೆಟ್ಟಾಗಿತ್ತು.

Srimurali 2

`ಕೆಜಿಎಫ್’ ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್ ಬರೆದಿರುವ ಕಥೆಗೆ, ಡಾ.ಸೂರಿ ನಿರ್ದೇಶನ ಮಾಡುತ್ತಿದ್ದು, ಬಘೀರನಾಗಿ ಶ್ರೀಮುರಳಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಶ್ರೀಮುರಳಿ ರಗಡ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ನಟಿಸಿದ್ದಾರೆ. ಈ ಹಿಂದೆಯೇ ಚಿತ್ರ ಫಸ್ಟ್ ಲುಕ್ ರಿವೀಲ್ ಆಗಿದ್ದು, ಶ್ರೀಮುರಳಿ ಸಖತ್ ಖಡಕ್ ಲುಕ್ಕಿನಲ್ಲಿ ಕಾಣಿಸಿಕೊಂಡಿದ್ರು. ಈ ಲುಕ್ ನೋಡಿ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದರು.

Share This Article