ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಯ್ದೆಯನ್ನು (Mahatma Gandhi NREGA) ಬದಲಿಸಿ ಗಾಂಧಿ ಹೆಸರನ್ನು ಕೈಬಿಟ್ಟದ್ದಕ್ಕೆ ಟೀಕೆ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಈಗ ಗಾಂಧಿ (Gandhi) ಹೆಸರಿನಲ್ಲಿ ಹೊಸ ಯೋಜನೆಯನ್ನು ಪ್ರಕಟಿಸಿದೆ.
ಖಾದಿ, ಕೈಮಗ್ಗ ಮತ್ತು ಕರಕುಶಲ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ’ಯನ್ನು ಜಾರಿಗೆ ತರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಟ್ರಂಪ್ ಟ್ಯಾರಿಫ್‌ಗೆ ನಿರ್ಮಲಾ ಟಾನಿಕ್ – ಕಸ್ಟಮ್ಸ್ ಸುಂಕ ವಿನಾಯಿತಿ ಘೋಷಣೆ
ಉದ್ಯೋಗ ಖಾತ್ರಿ ಯೋಜನೆಯಿಂದ ಗಾಂಧಿ ಹೆಸರನ್ನು ಕೈಬಿಟ್ಟಿದ್ದಕ್ಕೆ ವಿರೋಧ ಪಕ್ಷಗಳು ಮುಖ್ಯವಾಗಿ ಕಾಂಗ್ರೆಸ್ ಕೇಂದ್ರದ ವಿರುದ್ಧ ಭಾರೀ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆಗೆ ತಿರುಗೇಟು ಎನ್ನುವಂತೆ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆಯನ್ನು ಪ್ರಕಟಿಸಲಾಗಿದೆ. ಇದನ್ನೂ ಓದಿ: Union Budget 2026 | ಕರ್ನಾಟಕಕ್ಕೆ ಸಿಕ್ಕಿದ್ದೇನು? – ಈಡೇರದ ನಿರೀಕ್ಷೆಗಳೇನು?
ನೇಕಾರರು, ಗ್ರಾಮೀಣ ಕೈಗಾರಿಕೆಗಳು, ಗ್ರಾಮೀಣ ಪ್ರದೇಶದಲ್ಲಿರುವ ಯುವಕರು ಈ ಯೋಜನೆಯಿಂದ ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಇದರಿಂದಾಗಿ ಗ್ರಾಮೀಣ ಭಾರತದ ಉತ್ಪನ್ನಗಳು ಜಾಗತಿಕ ಮಟ್ಟಕ್ಕೆ ಹೋಗಲು ಸಹಾಯವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

