ವಾಷಿಂಗ್ಟನ್: ಸ್ಟಾರ್ಟ್ಅಪ್‌ಗಳಿಗೆ ಸಾಲ ನೀಡಲು ಹೆಸರುವಾಸಿಯಾಗಿದ್ದ ಅಮೆರಿಕದ (America) ಸಿಲಿಕಾನ್ ವ್ಯಾಲಿ ಬ್ಯಾಂಕ್ (SVB) ದಿವಾಳಿಯಾಗಿರುವ ಬೆನ್ನಲ್ಲೇ ಅಮೆರಿಕದ ಅಧಿಕಾರಿಗಳು ಮತ್ತೊಂದು ಟೆಕ್ ಸ್ನೇಹಿ ಬ್ಯಾಂಕ್ ಅನ್ನು ಮುಚ್ಚಿರುವುದಾಗಿ ಘೋಷಿಸಿದ್ದಾರೆ.
ಸಿಲಿಕಾನ್ ವ್ಯಾಲಿ ಬ್ಯಾಂಕ್ (Silicon Valley Bank) ದಿವಾಳಿಯಾದ ಬೆನ್ನಲ್ಲೇ ಸಿಗ್ನೇಚರ್ ಬ್ಯಾಂಕ್ (Signature Bank) ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಬ್ಯಾಂಕ್ ಕ್ರಿಪ್ಟೋಕರೆನ್ಸಿಗಳ ಸ್ಟಾಕ್ ಅನ್ನು ಹೊಂದಿತ್ತು. ಇದೀಗ ಅಪಾಯದ ದೃಷ್ಟಿಯಿಂದ ಬ್ಯಾಂಕ್ ಅನ್ನು ಸ್ವಲ್ಪ ಸಮಯದವರೆಗೆ ಮುಚ್ಚಲಾಗಿದೆ.
Advertisement
Advertisement
ಸಿಗ್ನೇಚರ್ ಬ್ಯಾಂಕ್ ನ್ಯೂಯಾರ್ಕ್ನಲ್ಲಿರುವ ಪ್ರಾದೇಶಿಕ ಬ್ಯಾಂಕ್ ಆಗಿದೆ. ಕಳೆದ ವರ್ಷ ಕೊನೆಯಲ್ಲಿ ಈ ಬ್ಯಾಂಕ್ ಅನ್ನು ಫೆಡರಲ್ ಡೆಪಾಸಿಟ್ ಇನ್ಶುರೆನ್ಸ್ ಕಾರ್ಪೊರೇಷನ್ (FDIC) ತೆಗೆದುಕೊಂಡಿದೆ ಎಂದು ನ್ಯೂಯಾರ್ಕ್ ರಾಜ್ಯ ಹಣಕಾಸು ಸೇವೆಗಳ ಇಲಾಖೆ ತಿಳಿಸಿದೆ. ಸದ್ಯ ಸಿಗ್ನೇಚರ್ ಬ್ಯಾಂಕ್ ಹಾಗೂ ಸಿಲಿಕಾನ್ ವ್ಯಾಲಿ ಬ್ಯಾಂಕ್‌ನ ಯಾವುದೇ ನಷ್ಟದ ಹೊರೆಯನ್ನು ತೆರಿಗೆದಾರರು ಭರಿಸುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಲಂಕಾ ವಿರುದ್ಧ ಕಿವೀಸ್‌ಗೆ ರೋಚಕ ಜಯ – 2ನೇ ಬಾರಿ WTC ಫೈನಲ್‌ಗೆ ಭಾರತ
Advertisement
ಟೆಕ್ ಸ್ಟಾರ್ಟ್ಅಪ್‌ಗಳಿಗೆ ಮೂಲ ಕಂಪನಿಯಾಗಿದ್ದ ಸಿಲಿಕಾನ್ ವ್ಯಾಲಿ ಬ್ಯಾಂಕ್‌ನ ಠೇವಣಿದಾರರು ಹಾಗೂ ಹೂಡಿಕೆದಾರರು ಬರೋಬ್ಬರಿ 42 ಬಿಲಿಯನ್ ಡಾಲರ್‌ನಷ್ಟು (ಸುಮಾರು 282 ಲಕ್ಷ ಕೋಟಿ ರೂ.) ಬೃಹತ್ ಮೊತ್ತದ ಹಣವನ್ನು ಹಿಂಪಡೆದ ಪರಿಣಾಮವಾಗಿ ಬ್ಯಾಂಕ್‌ನ ನಗದು ವ್ಯವಹಾರದಲ್ಲಿ ಕೊರತೆ ಕಂಡುಬಂದಿದೆ. ಈ ಕಾರಣದಿಂದಾಗಿ ಕಳೆದ ವಾರ ಸಿಲಿಕಾನ್ ವ್ಯಾಲಿ ಬ್ಯಾಂಕ್ ವ್ಯವಹಾರಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
Advertisement
ಕಳೆದ ಶುಕ್ರವಾರ ಕ್ಯಾಲಿಫೋರ್ನಿಯಾದ ಬ್ಯಾಂಕಿಂಗ್ ಅಧಿಕಾರಿಗಳು ಸಿಲಿಕಾನ್ ವ್ಯಾಲಿ ಬ್ಯಾಂಕ್ ಅನ್ನು ಮುಚ್ಚಿದ್ದಾರೆ. 2008ರಲ್ಲಿ ಉಂಟಾದ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಬಳಿಕ ಇದು ಅತ್ಯಂತ ದೊಡ್ಡ ಬ್ಯಾಂಕಿಂಗ್‌ನ ವೈಫಲ್ಯ ಎನಿಸಿಕೊಂಡಿದೆ. ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಕೇಂದ್ರ ಸರ್ಕಾರದ ವಿರೋಧ