– ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ; ಡೇಟ್ ಫಿಕ್ಸ್ ಮಾಡಿ ಪೋಸ್ಟ್
ಮಂಗಳೂರು: ಸುಹಾಸ್ ಶೆಟ್ಟಿ (Suhas Shetty) ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ (Hindu Activist) ಹತ್ಯೆಗೆ ಸಂಚು ರೂಪಿಸಲಾಗಿದೆ. ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಇದ್ದು, ಡೀಟ್ ಫಿಕ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿದಾಡುತ್ತಿದೆ.
ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಲಾಗಿದೆ. ‘5/5/2025 ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಕೊಲೆ’ ಮಾಡುವುದಾಗಿ ಪೋಸ್ಟ್ ಹರಿಬಿಡಲಾಗಿದೆ. ಸುಹಾಸ್ ಶೆಟ್ಟಿ ಪೋಟೋಗೆ ರೈಟ್ ಚಿಹ್ನೆ ಹಾಕಿ ಹಂತಕರು ವಿಕೃತಿ ಮೆರೆದಿದ್ದರು. ಇದನ್ನೂ ಓದಿ: ಸುಹಾಸ್ ಶೆಟ್ಟಿ ಮೇಲೂ ಐದು ಕೇಸ್‌ಗಳಿವೆ.. ಅದ್ಕೆ ಅವರ ಮನೆಗೆ ನಾವು ಭೇಟಿ ಕೊಟ್ಟಿಲ್ಲ: ಪರಮೇಶ್ವರ್
ಎಸ್‌ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿ ಭರತ್ ಕುಮ್ಡೇಲು. 2017ರ ಜೂನ್ 21 ರಂದು ಅಶ್ರಫ್ ಹತ್ಯೆಯಾಗಿತ್ತು. ಬಂಟ್ವಾಳದ ಬೆಂಜನಪದವು ಎಂಬಲ್ಲಿ ಅಶ್ರಫ್ ಬರ್ಬರವಾಗಿ ಹತ್ಯೆಗೀಡಾಗಿದ್ದ. ಎಸ್‌ಡಿಪಿಐನಲ್ಲಿ ಅಶ್ರಫ್ ಮುಂಚೂಣಿಯಲ್ಲಿದ್ದ. ಆತನ ಹತ್ಯೆ ಬಳಿಕ ಪ್ರತೀಕಾರವಾಗಿ ಬಂಟ್ವಾಳದ ಶರತ್ ಮಡಿವಾಳ ಹತ್ಯೆಯಾಗಿತ್ತು.
ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಎಂದು ಪೋಸ್ಟ್ ಹರಿಬಿಡಲಾಗಿದೆ. ಪೊಲೀಸ್ ಇಲಾಖೆಯ ಕ್ರಮದ ನಡುವೆ ದ್ವೇಷ ಕಾರುವ ಪೋಸ್ಟ್ ಹಾಕಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಮುಖಂಡರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ವಿಹೆಚ್‌ಪಿ ಮುಖಂಡ ಶರಣ್ ಪಂಪ್ವೆಲ್ ಹಾಗೂ ಭಜರಂಗದಳ ಮುಖಂಡ ಭರತ್ ಕುಮ್ಡೇಲ್‌ಗೆ ಜೀವಬೆದರಿಕೆ ಬಂದಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ, ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ