ಮುಂಬೈಯಲ್ಲಿ ಜೂನ್ 30ರವರೆಗೂ 144 ಸೆಕ್ಷನ್ ಜಾರಿ

Public TV
2 Min Read
144

ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸರ್ಕಾರ ರಕ್ಷಿಸುವ ನಿಟ್ಟಿನಲ್ಲಿ ಶಿವಸೇನೆಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದ್ದು, ಸಭೆಯಲ್ಲಿ ಮುಂದಿನ ಕ್ರಮದ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಥಾಣೆ, ಮುಂಬೈನಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಜಾರಿಯಾಗಿದೆ.

ಜೂನ್ 30ರ ವರೆಗೂ 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಮೆರವಣಿಗೆ, ಘೋಷಣಾ ವಾಕ್ಯಗಳು ಕೂಗುವುದು, ಜನರು ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಶಿವಸೇನೆ ಹೆಸರು ಬಳಸದಂತೆ ಶಿಂಧೆಗೆ ಠಾಕ್ರೆ ಸವಾಲ್ – 16 ರೆಬೆಲ್ ಶಾಸಕರಿಗೆ ನೊಟೀಸ್

SECTION

ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ರಾಜಕೀಯ ಮೆರವಣಿಗೆ, ಸಭೆ ಅಥವಾ ಘೋಷಣೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಮುಂಬೈ ಪೊಲೀಸರು ನಗರದ ಎಲ್ಲ ರಾಜಕೀಯ ಕಚೇರಿಗಳ ಭದ್ರತೆ ಬಗ್ಗೆ ಖಚಿತಪಡಿಸಿಕೊಳ್ಳಲು ಎಲ್ಲ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಿದ್ದಾರೆ. ಅಧಿಕಾರಿ ಮಟ್ಟದ ಪೊಲೀಸ್ ಸಿಬ್ಬಂದಿ ಪ್ರತಿ ರಾಜಕೀಯ ಕಚೇರಿಗೆ ಭೇಟಿ ನೀಡಿ ಭದ್ರತೆ ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ. ಇದನ್ನೂ ಓದಿ: ಮಹಿಳಾ ಸಹೋದ್ಯೋಗಿ ಮೇಲೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಇನ್ಸ್‌ಪೆಕ್ಟರ್

ಶಿವಸೇನೆ ಶಾಸಕ ಏಕನಾಥ ಶಿಂಧೆ ಹಾಗೂ ಅವರ ಬೆಂಬಲಿಗರ ಬಂಡಾಯದಿಂದ ರಾಜಕೀಯ ಬಿಕ್ಕಟ್ಟು ತಲೆದೋರಿದೆ. ಇದರಿಂದ ಆಕ್ರೋಶಗೊಂಡಿರುವ ಶಿವಸೇನೆ ಕಾರ್ಯಕರ್ತರು ಹಲವೆಡೆ ದಾಂಧಲೆ ನಡೆಸಿದ್ದು ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಶಿಂಧೆ ಬೆಂಬಲಿಗರ ಫ್ಲೆಕ್ಸ್ ಬೋರ್ಡ್‌ಗಳ ಮೇಲೆ ಸೇನಾ ಕಾರ್ಯಕರ್ತರು ದಾಳಿ ನಡೆಸಿರುವ ಹಲವು ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ.

PROTEST

ಇಂದು ಸಭೆ ನಡೆಯುತ್ತಿದ್ದು, ಬಂಡಾಯ ಶಾಸಕರ ವಿರುದ್ಧ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚೆಗಳು ನಡೆಯಲಿವೆ ಎನ್ನಲಾಗುತ್ತಿದೆ. ಸಭೆ ಬಳಿಕ 16 ಬಂಡಾಯ ಶಿವಸೇನೆ ಶಾಸಕರಿಗೆ ಅನರ್ಹತೆ ನೋಟಿಸ್ ಕಳುಹಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಬಂಡಾಯ ನಾಯಕ ಏಕನಾಥ್ ಶಿಂಧೆ ಬಣಕ್ಕೆ ಮತ್ತೋರ್ವ ಶಾಸಕ ಸೇರಿಕೊಂಡಿದ್ದು, ಅಸ್ಸಾಂ ರಾಜಧಾನಿಯಲ್ಲಿ ಬೀಡುಬಿಟ್ಟ ಶಿವಸೇನೆ ಶಾಸಕರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಅರ್ಹನತೆ ಭೀತಿಯಿಂದ (56ರ ಶಾಸಕರಲ್ಲಿ 3ನೇ ಎರಡರಷ್ಟು ಸಂಖ್ಯೆ 37) ಶಾಸಕರು ಪಾರಾಗಿದ್ದಾರೆ. ಇದರೊಂದಿಗೆ ಶಿವಸೇನೆ-ಎನ್‌ಸಿಪಿ- ಕಾಂಗ್ರೆಸ್ ಮೈತ್ರಿಕೂಟ ಹೊಂದಿರುವ ಉದ್ಧವ್ ಠಾಕ್ರೆ ಮುಖ್ಯಂತ್ರಿಯಾಗಿರುವ ಸರ್ಕಾರ ಪತನಗೊಳ್ಳಲು ಕ್ಷಣಗಣನೆ ಆರಂಭವಾಗಿದೆ. ಇದರೊಂದಿಗೆ ಶಿಂಧೆ ಬಣದಲ್ಲಿರುವ ಶಾಸಕರ ಸಂಖ್ಯೆ ಪಕ್ಷೇತರರೂ ಸೇರಿ 50ಕ್ಕೆ ಏರಿಕೆಯಾಗಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *