ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಬಳಿಕ ಇದೀಗ ಕಾಂಗ್ರೆಸ್ ನಾಯಕರಿಗೆ (Congress Leaders) ಪ್ರಾಸಿಕ್ಯೂಷನ್ ಭೀತಿ ಎದುರಾಗಿದೆ. ಸಿಎಂ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ.
ಈಗಾಗಲೇ ಸಚಿವ ಕೆಐಎಡಿಬಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಎಂ.ಬಿ.ಪಾಟೀಲ್ (MB Patil) ಹಾಗೂ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧದ ದೂರು ರಾಜ್ಯಪಾಲರ ಮುಂದಿದೆ. ಡಿಸಿಎಂ ಡಿಕೆಶಿ ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ.
ನನ್ನ ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನನ್ನ ವಿರುದ್ಧವೂ ಏನೇನೋ ಸಿದ್ದತೆ ನಡೆಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕೇರಳ ರಾಜಕಾರಣದಲ್ಲೂ ಕಾಸ್ಟಿಂಗ್ ಕೌಚ್ ಕೋಲಾಹಲ; ಪಕ್ಷದ ನಾಯಕರಿಂದ ಕಿರುಕುಳ – ಕಾಂಗ್ರೆಸ್ ನಾಯಕಿ ರೋಸ್‌ಬೆಲ್ ಬಾಂಬ್
ಈ ಹಿಂದೆ ನಡೆದ ವಿಚಾರಣೆ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮೂವರು ಮಾಜಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳು ತಮ್ಮ ಬಳಿ ಬಾಕಿ ಇಲ್ಲ ಎಂದು ರಾಜಭವನ ಅಧಿಕೃತ ದಾಖಲೆಯನ್ನು ನ್ಯಾಯಾಲಯಕ್ಕೆ ನೀಡಿತ್ತು.
ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಪೀಠಕ್ಕೆ ಟಿ.ಜೆ.ಅಬ್ರಾಹಂ ಪರ ವಕೀಲ ರಂಗನಾಥ್ ರೆಡ್ಡಿ ಈ ದಾಖಲೆ ಸಲ್ಲಿಸಿದ್ದರು. ಈ ವೇಳೆ ನ್ಯಾ.ನಾಗಪ್ರಸನ್ನ ಅವರು ನಿಮಗೆ ಈ ವಿಷಯ ಹೇಗೆ ಗೊತ್ತು ಎಂದು ಪ್ರಶ್ನಿಸಿದ್ದರು. ಇದಕ್ಕೆ ರಂಗನಾಥ್ ರೆಡ್ಡಿ, ಆರ್‌ಟಿಐ ಮೂಲಕ ಮಾಹಿತಿ ಪಡೆಯಲಾಗಿದೆ. ರಾಜಭವನ ಕಚೇರಿ ನೀಡಿರುವ ಉತ್ತರದಲ್ಲಿ ಯಾವುದೇ ಅರ್ಜಿ ಬಾಕಿ ಇಲ್ಲ ಎಂದು ತಿಳಿಸಲಾಗಿದೆ ಎಂದು ಉತ್ತರಿಸಿದ್ದರು.