ಬೆಂಗಳೂರು: ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ನಕ್ಸಲರ ಚಟುವಟಿಕೆಗಳು ಶುರುವಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ (Sunil Kumar) ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮತ್ತು ಪೊಲೀಸರ ಕಾರ್ಯಚರಣೆಯನ್ನು ಸ್ವಾಗತ ಮಾಡುತ್ತೇನೆ. ಅನೇಕ ವರ್ಷಗಳಿಂದ ನಕ್ಸಲ್ ಚಟುವಟಿಕೆಗಳು ಸ್ತಬ್ದವಾಗಿತ್ತು. ಆದರೆ ಕಳೆದ ಒಂದೂವರೆ ವರ್ಷದಿಂದ ಮತ್ತೆ ನಕ್ಸಲ್ ಚಟುವಟಿಕೆಗಳು ಶುರುವಾಗಿದೆ. ನಗರ ನಕ್ಸಲ್ಗಳು ಸಹ ಇದ್ದಾರೆ. ಕಾಡಿನಲ್ಲಿ ಕೂತು ಬಂದೂಕು ಹಿಡಿದು ಕಾರ್ಯಚರಣೆ ಮಾಡುವವರು ಇದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ನಕ್ಸಲ್ ಚಟುವಟಿಕೆಯನ್ನು ಮಟ್ಟ ಹಾಕಿದ್ದೆವು. ಇವರೆಲ್ಲ ಹೊರ ರಾಜ್ಯಗಳಲ್ಲಿ ತಲೆಮರಿಸಿಕೊಂಡಿದ್ದರು. ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ತಮ್ಮ ಚಟುವಟಿಕೆಗಳನ್ನು ಮಾಡಲು ಬಂದಿದ್ದಾರೆ. ನಗರ ನಕ್ಸಲ್ಗಳ ಚಟುವಟಿಕೆಗಳನ್ನ ಸರ್ಕಾರ ಗಮನಿಸಬೇಕು. ವಿಶ್ವವಿದ್ಯಾಲಯ, ಸಾಹಿತಿಗಳು ಎಂದು ಹೇಳಿಕೊಳ್ಳುವವರು, ಬುದ್ಧಿ ಜೀವಿಗಳು ಈ ನಕ್ಸಲ್ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಾರೆ ಎಂದರು.ಇದನ್ನೂ ಓದಿ: ಕ್ಷೇತ್ರದ ಅಭಿವೃದ್ಧಿಗೆ ಅನುದಾನವೇ ಸಿಗುತ್ತಿಲ್ಲ: ಸರ್ಕಾರದ ವಿರುದ್ಧವೇ ಕೈ ಶಾಸಕ ಗವಿಯಪ್ಪ ಆಕ್ರೋಶ
Advertisement
Advertisement
ನಕ್ಸಲರ ಮಟ್ಟ ಹಾಕಬೇಕು. ಕ್ಷಮೆ ಕೋರಿ ಬರುವ ವಿಚಾರದಲ್ಲಿ ಸರ್ಕಾರ ಚರ್ಚೆ ಮಾಡಬೇಕು. ನಕ್ಸಲ್ ಚಟುವಟಿಕೆಯನ್ನ ಮತ್ತೆ ನಗರಕ್ಕೆ ಬಂದು ಮುಂದುವರಿಸುವವರಿದ್ದಾರೆ. ಅದರ ಬಗ್ಗೆ ನಿಗಾವಹಿಸಬೇಕು. ನಕ್ಸಲ್ ನಿಗ್ರಹ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕು ಎಂದು ತಿಳಿಸಿದರು.
Advertisement
ವಿಜಯನಗರ (Vijayanagar) ಶಾಸಕ ಗವಿಯಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಶಾಸಕರಿಗೆ ಮಾತ್ರ ಅನುದಾನ ನೀಡುತ್ತಿಲ್ಲ ಅಂದುಕೊಂಡಿದ್ದೆ. ರಾಜ್ಯದ 224 ಕ್ಷೇತ್ರದ ಅಭಿವೃದ್ಧಿಗೆ ಈ ಸರ್ಕಾರ ಒಂದು ರೂಪಾಯಿ ನೀಡುತ್ತಿಲ್ಲ. ಅವರ ಶಾಸಕರೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯಾಗುತ್ತಿದೆ. ಉಡುಪಿ, ಕಾರ್ಕಳ, ಮೂಡಿಗೆರೆ ಸೇರಿದಂತೆ ಈ ಭಾಗದಲ್ಲಿ ಅಭಿವೃದ್ಧಿ ಕೆಲಸಗಳು ಆಗಿದೆ. ಇನ್ನೂ ಅಭಿವೃದ್ಧಿ ಕೆಲಸಗಳನ್ನ ಸರ್ಕಾರ ಮಾಡಬೇಕು. ಅದಕ್ಕಾಗಿ ವಿಶೇಷ ಪ್ಯಾಕೇಜ್ ನೀಡಬೇಕು. ಆದರೆ ಇವರು ಒಂದೇ ಒಂದು ಅಭಿವೃದ್ಧಿ ಕಾರ್ಯಕ್ರಮದ ಶಂಕುಸ್ಥಾಪನೆಯನ್ನು ಇಲ್ಲಿಯವರೆಗೆ ಮಾಡಿಲ್ಲ. ಈ ಸರ್ಕಾರ ಹಗರಣಗಳಲ್ಲಿ, ಭ್ರಷ್ಟಾಚಾರದಲ್ಲಿ ಮುಳುಗಿದೆ. ಎರಡು ವರ್ಷಗಳ ಅವಧಿಯಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯವನ್ನೂ ಮಾಡಿಲ್ಲ ಎಂದು ಆಗ್ರಹಿಸಿದರು.ಇದನ್ನೂ ಓದಿ: ಮಸ್ಕ್ ಸ್ಪೇಸ್ ಎಕ್ಸ್ ರಾಕೆಟ್ನಲ್ಲಿ ಇಸ್ರೋ ಉಪಗ್ರಹ ಉಡಾವಣೆ ಯಶಸ್ವಿ