ಹಾವೇರಿ: ಶಿಗ್ಗಾಂವಿ (Shiggaon) ಸಂತೆ ಮೈದಾನದಲ್ಲಿ ಭಗವಾಧ್ವಜ (Bhagwa Dhwaj) ಹಾಗೂ ಹಸಿರು ಬಾವುಟವನ್ನು ಹಾರಿಸಲಾಗಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಎರಡೂ ಬಾವುಟವನ್ನು ಸಿಬ್ಬಂದಿ ತೆರವುಗೊಳಿಸಿದ್ದಾರೆ.
ಈ ಹಿಂದೆ ಸಂತೆ ಮೈದಾನದಲ್ಲಿ ನಡೆದ ಕಾರ್ಯಕ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಭಾಷಣ ಮಾಡುವ ವೇಳೆ, ಶಿಗ್ಗಾಂವಿ ಸಂತೆ ಮೈದಾನದಲ್ಲಿ ಮುಸ್ಲಿಂ ಧ್ವಜ ಬಂದಿದೆ. ಇದುವರೆಗೂ ಈ ಧ್ವಜ ಇರಲಿಲ್ಲ. ಈ ಕ್ಷೇತ್ರದಲ್ಲಿ ಹೇಳೋರು ಕೇಳೋರು ಇಲ್ವಾ? ನಾವೂ ಸಂತೆ ಮೈದಾನದಲ್ಲಿ ಭಗವಾಧ್ವಜ ಹಾರಿಸುತ್ತೇವೆ. ಇದೆಲ್ಲ ನಿಲ್ಲಬೇಕೆಂದರೆ ಭರತ್ ಬೊಮ್ಮಾಯಿಯನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಹೇಳಿದ್ದರು. ಇದನ್ನೂ ಓದಿ: ಭಾರತ ಬರಲಿ, ಬಾರದೇ ಇರಲಿ ನಾವು ಚಾಂಪಿಯನ್ಸ್ ಟ್ರೋಫಿ ಆಯೋಜಿಸುತ್ತೇವೆ: ಪಾಕಿಸ್ತಾನ
Advertisement
Advertisement
ಈ ಹಿನ್ನೆಲೆ ರಾತ್ರೋರಾತ್ರಿ ಲೈಟ್ ಕಂಬಕ್ಕೆ ಹಿಂದೂಪರ ಸಂಘಟನೆಗಳು ಹಸಿರು ಬಾವುಟದ ಮೇಲೆ ಇನ್ನಷ್ಟು ಎತ್ತರಕ್ಕೆ ಭಗವಾಧ್ವಜವನ್ನು ಹಾರಿಸಿದ್ದರು. ಭಾರೀ ವಿವಾದದ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಎರಡು ಧ್ವಜಗಳನ್ನೂ ಇಳಿಸಿದೆ. ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ಸೂಚನೆ ಮತ್ತು ಚುನಾವಣಾ ಆಯೋಗದ ಸೂಚನೆ ಮೇರೆಗೆ ಸಿಬ್ಬಂದಿ ಧ್ವಜ ಇಳಿಸಿದ್ದಾರೆ. ಸಂತೆ ಮೈದಾನದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಗೋಕಾಕ್ ಜಿಲ್ಲೆಗೆ ಆಗ್ರಹಿಸಿ ನಿರಂತರ ಹೋರಾಟ : ಶ್ರೀ ಮುರುಘರಾಜೇಂದ್ರ ಸ್ವಾಮೀಜಿ
Advertisement