ಕಾರವಾರ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಬೀಳುವ ಸಾಧ್ಯತೆಗಳಿವೆ. ಹೀಗಾಗಿ ಎಲ್ಲ ರೀತಿಯಿಂದಲೂ ನಾವು ಸಿದ್ಧವಾಗಿರಬೇಕು ಎಂದು ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಕಾರ್ಯಕರ್ತರಿಗೆ ಕರೆಕೊಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಇಂದು ನಡೆದ ಬಿಜೆಪಿ ಕಾರ್ಯಕರ್ತರ ಅವಲೋಕನ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು, ಮತ್ತೊಂದು ಚುನಾವಣೆಗೆ ಈಗಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಿದೆ. ಕಾರ್ಯರ್ತರು ರೆಸ್ಟ್ ಮೂಡ್‍ಗೆ ಹೋಗುವುದು ಬೇಡ. ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗುತ್ತದೆ ಎಂದರು.
Advertisement
Advertisement
ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಚಿಹ್ನೆ ಇರುತ್ತದೆ. ರಾಜ್ಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚನೆ ಮಾಡಿದರು. ಆದರೆ ಈಗ ಅದು ಅಲುಗಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
Advertisement
ಸಾಧನೆ ಮಾಡಬೇಕು ಎನ್ನುವ ವ್ಯಕ್ತಿ ವಿಶ್ರಾಂತಿ ಬಗ್ಗೆ ಹೆಚ್ಚು ಗಮನ ಹರಿಸಬಾರದು. ಮಲಗಿದ್ದಾಗಲೂ ಒಂದು ವಿಷಯದ ಕುರಿತು ವಿಚಾರ ಮಾಡುತ್ತಿರಬೇಕು. ನಾನು ಒಂದು ದಿನವೂ ವಿಶ್ರಾಂತಿ ತೆಗೆದುಕೊಂಡಿಲ್ಲ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 23ರಂದು ಮುಗಿಯುತ್ತಿದ್ದಂತೆ ಮತ್ತೆ ನನ್ನ ಕಾರ್ಯಕ್ಕೆ ಹಾಜರಾದೆ ಎಂದು ಹೇಳಿದರು.