ಕೋಲಾರ: ಕೋಲಾರ (Kolar) ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ಎಂದೇ ಬಿಂಬಿಸಲಾಗಿರುವ ಮಾಜಿ ಶಾಸಕ ವರ್ತೂರು ಪ್ರಕಾಶ್ (Varthur Prakash) ಇಂದು ಬೈಕ್ ರ್‍ಯಾಲಿ ಹಮ್ಮಿಕೊಂಡರು.
ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ (Siddaramaiah) ಬಂದು ಹೋದ ಬಳಿಕ ಸಖತ್ ಆಕ್ಟೀವ್ ಆಗಿರುವ ಮಾಜಿ ಸಚಿವ ವರ್ತೂರು ಪ್ರಕಾಶ್ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಅದರಂತೆ ಇಂದು ಕೋಲಾರ ವಿಧಾನಸಭಾ ಕ್ಷೇತ್ರದ ಮಾರ್ಜೇನಹಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ ಭರ್ಜರಿ ಬೈಕ್ ರ್‍ಯಾಲಿ ನಡೆಸಿದರು. ಕೋಲಾರ ನಗರದಿಂದ ಆರಂಭವಾದ ಬೈಕ್ ರ್‍ಯಾಲಿ ಮಣಿಘಟ್ಟ, ಮಾರ್ಜೇನಹಳ್ಳಿ, ಕೂತಂಡಹಳ್ಳಿ ಸೇರಿದಂತೆ ಎರಡು ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಸಂಚರಿಸಿದರು.
ಇನ್ನು ಕೋಲಾರ ನಗರದ ಕೋರ್ಟ್ ವೃತ್ತದಿಂದ ಆರಂಭವಾದ ಬೈಕ್ ರ್‍ಯಾಲಿ ಗ್ರಾಮೀಣ ಭಾಗಗಳಲ್ಲಿ ಸಂಚರಿಸಿತು. ಮಧ್ಯಾಹ್ನದ ನಂತರ ಕೋಲಾರ ತಾಲೂಕು ಮಾರ್ಜೇನಹಳ್ಳಿ ಗ್ರಾಮದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದ್ದು, ಹತ್ತಾರು ಮುಖಂಡರು ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ತೊರೆದು ಬಿಜೆಪಿ ಸೇರ್ಪಡೆಗೊಂಡರು. ಇದನ್ನೂ ಓದಿ: ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್ ಸೇವೆ ಮಾಡಲು ನೇಮಕವಾಗಿದ್ರು 10 ಜನ!
ಇದೇ ವೇಳೆ ಮಾತನಾಡಿದ ವರ್ತೂರ್ ಪ್ರಕಾಶ್ ಬಿಜೆಪಿ ಸೇರ್ಪಡೆ ನಂತರದಲ್ಲಿ ಪಕ್ಷ ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನನ್ನದೆ ಆದ ಶಕ್ತಿ ಸಾಮಾರ್ಥ್ಯದ ಜೊತೆಗೆ ಮುಂದಿನ ತಿಂಗಳ 19ರೊಳಗೆ ಮುಖ್ಯಮಂತ್ರಿಗಳನ್ನು ಕರೆದು ಬೃಹತ್ ಸಭೆ ಮಾಡಲಾಗುವುದು. ಇನ್ನೂ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಾವುಟ ಹಾರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಆಂಧ್ರದ ಚಿತ್ತೂರಿನಲ್ಲಿ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ