ಕನ್ನಡದ ‘ಮುಗಿಲ್‌ಪೇಟೆ’ (Mugilpete Kannada) ಚಿತ್ರದ ನಟಿ ಕಯಾದು ಲೋಹರ್ (Kayadu Lohar) ಇದೀಗ ಸೌತ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಕಯಾದು ನಟಿಸಿದ ತಮಿಳಿನ ‘ಡ್ರ್ಯಾಗನ್’ (Dragon Film) ಸಿನಿಮಾ ಸಕ್ಸಸ್ ಕಂಡಿದೆ. ಈ ಬೆನ್ನಲ್ಲೇ ಹಲವಾರು ಸಿನಿಮಾ ಅವಕಾಶಗಳು ಅವರನ್ನು ಅರಸಿ ಬಂದಿವೆ. ಸ್ಟಾರ್ ನಟನ ಜೊತೆ ನಟಿಸುವ ಚಾನ್ಸ್ ಸಿಕ್ಕಿದೆ. ಇದನ್ನೂ ಓದಿ:ಜಾನ್ವಿ ಕಪೂರ್‌ಗೆ ವಿಶೇಷ ಉಡುಗೊರೆ ನೀಡಿದ ರಾಮ್ ಚರಣ್ ಪತ್ನಿ
ಫೆ.21ರಂದು ರಿಲೀಸ್ ಆದ ತಮಿಳಿನ ‘ಡ್ರ್ಯಾಗನ್’ ಸಿನಿಮಾದಲ್ಲಿ ಪ್ರದೀಪ್ ರಂಗನಾಥನ್‌ಗೆ ನಾಯಕಿಯಾಗಿ ಗಮನ ಸೆಳೆದಿದ್ದಾರೆ. ಈ ಸಿನಿಮಾ ಯಶಸ್ವಿಯಾಗಿದೆ. ಈ ಬೆನ್ನಲ್ಲೇ ತಮಿಳಿನ ಖ್ಯಾತ ನಟ ಸಿಂಬು (Simbu) ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾದ ವಿಚಾರವೊಂದು ಚರ್ಚೆಗೆ ಗ್ರಾಸವಾಗಿದೆ. ಈ ಚಿತ್ರವನ್ನು ರಾಮ್ ಕುಮಾರ್ ಎಂಬುವವರು ನಿರ್ದೇಶನ ಮಾಡ್ತಿದ್ದಾರೆ.
ಇನ್ನೂ ತೆಲುಗಿನ ನಟ ವಿಶ್ವಕ್ ಸೇನ್ ನಟನೆಯ ‘ಫಂಕಿ’ ಚಿತ್ರಕ್ಕೂ ಕಯಾದು ಅವರನ್ನೇ ನಾಯಕಿಯಾಗಿ ಸೆಲೆಕ್ಟ್ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡು ಪ್ರಾಜೆಕ್ಟ್‌ಗಳ ಬಗ್ಗೆ ಅಧಿಕೃತವಾಗಿ ಘೋಷಣೆ ಆಗುವವರೆಗೂ ಕಾದುನೋಡಬೇಕಿದೆ.
ಸದ್ಯ ಕಯಾದು ತಮಿಳಿನ ‘ಹೃದಯಂ ಮುರಳಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅಥರ್ವಗೆ ನಾಯಕಿಯಾಗಿ ಸಾಥ್ ನೀಡುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದೆ.
2021ರಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ನಟನೆಯ ‘ಮುಗಿಲ್‌ಪೇಟೆ’ ಚಿತ್ರಕ್ಕೆ ನಾಯಕಿಯಾಗಿ ಕಯಾದು ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟರು. ಆ ನಂತರ ಮಲಯಾಳಂ, ತೆಲುಗು, ಮರಾಠಿ ಸಿನಿಮಾಗಳಲ್ಲಿ ನಟಿಸಿದರು. ಈಗ ತೆಲುಗಿನಿಂದಲೂ ಅವಕಾಶಗಳು ಸಿಗುತ್ತಿವೆ.