ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ ಸಿನಿಮಾ ಕೋಟಿ ಕೋಟಿ ಹಣ ಗಳಿಸುತ್ತಿದ್ದಂತೆಯೇ ಅವರ ಹಳೆ ಚಿತ್ರಗಳಿಗೆ ಬೇಡಿಕೆ ಬಂದಿದೆ. ಸೋಲಿನ ಸುಳಿಯಲ್ಲಿದ್ದ ಬಾಲಿವುಡ್ ಗೂ ಪಠಾಣ್ ಸಿನಿಮಾ ಟಾನಿಕ್ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಹೀಗಾಗಿ ಶಾರುಖ್ ಹಳೆಯ ಚಿತ್ರಗಳಿಗೆ ಡಿಮ್ಯಾಂಡ್ ಸೃಷ್ಟಿಯಾಗಿದ್ದು, ಪ್ರೇಮಿಗಳ ದಿನಕ್ಕಾಗಿ ‘ದಿಲ್ ವಾಲೆ ದುಲ್ಹನಿಯಾ ಲೇಜಾಯೆಂಗೆ’ (Dil Wale Dulhania Le jayenge) ಚಿತ್ರ ಬಿಡುಗಡೆ ಆಗುತ್ತಿದೆ.
28 ವರ್ಷಗಳ ಹಿಂದೆ ತೆರೆಕಂಡ ಈ ಸಿನಿಮಾದಲ್ಲಿ ಶಾರುಖ್ ಖಾನ್, ಕಾಜೋಲ್ (Kajol), ಸಿಮ್ರನ್ (Simran) ಪಾತ್ರಗಳು ನೋಡುಗರ ಮನತಟ್ಟಿದ್ದವು. ಈ ಸಿನಿಮಾ ಕೇವಲ ಪ್ರೇಮಕಥೆಯನ್ನು ಆಧರಿಸಿದ್ದಲ್ಲದೇ, ಫ್ಯಾಮಿಲಿ ಎಮೋಷನ್ ಕೂಡ ಚಿತ್ರದಲ್ಲಿತ್ತು. ಈ ಕಾರಣದಿಂದಾಗಿ ಕೇವಲ ಪ್ರೇಮಿಗಳಿಗೆ ಮಾತ್ರವಲ್ಲ, ಕುಟುಂಬದ ಪ್ರತಿ ಸದಸ್ಯರು ಒಟ್ಟಾಗಿ ಈ ಸಿನಿಮಾ ನೋಡಿ ಗೆಲ್ಲಿಸಿದ್ದರು. ಇದನ್ನೂ ಓದಿ:ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ವಿಚಾರ ನಿಜಾನಾ? ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ
ಈ ಸಿನಿಮಾ ಆ ವರ್ಷದಲ್ಲಿ ಅನೇಕ ದಾಖಲೆಗಳನ್ನು ಬರೆದಿತ್ತು. ನಿರ್ದೇಶಕ, ನಟ, ನಟಿಯರು ಸೇರಿದಂತೆ ಹತ್ತು ವಿಭಾಗಗಳಲ್ಲಿ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿತ್ತು. ಅಭಿಮಾನಿಗಳಿಗೆ ಶಾರುಖ್ ಖಾನ್ ಗೆ ‘ಕಿಂಗ್ ಆಫ್ ರೊಮ್ಯಾನ್ಸ್’ ಎನ್ನುವ ಬಿರುದು ನೀಡಿದ್ದರು. ಸತತ 25 ವರ್ಷಗಳ ಕಾಲ ಮುಂಬೈನ ಮರಾಠ ಮಂದಿರದಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿದೆ. ಇಂತಹ ಸಿನಿಮಾವನ್ನು ಪ್ರೇಮಿಗಳ ದಿನದ ಕೊಡುಗೆಯಾಗಿ ಈ ವಾರ ಮತ್ತೆ ಬಿಡುಗಡೆ ಮಾಡಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k