ನವದೆಹಲಿ: ರೋಹಿಂಗ್ಯಾ ಮುಸ್ಲಿಮರಿಗೆ ವಸತಿ ನೀಡುತ್ತೇವೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ಈಗ ಯಾವುದೇ ಫ್ಲ್ಯಾಟ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ದೆಹಲಿಯಲ್ಲಿರುವ ರೋಹಿಂಗ್ಯಾ ಮುಸ್ಲಿಮರಿಗೆ ಇಡಬ್ಲ್ಯುಎಸ್ ಫ್ಲಾಟ್‌ಗಳನ್ನು ನೀಡಲು ಯಾವುದೇ ನಿರ್ದೇಶನ ನೀಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಅಷ್ಟೇ ಅಲ್ಲದೇ ಅಕ್ರಮ ವಿದೇಶಿಗರು ಅವರು ನೆಲೆಸಿರುವ ಸ್ಥಳದಲ್ಲಿಯೇ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಸೂಚಿಸಿದೆ.
Advertisement
Rohingya Illegal Foreigners
Press release-https://t.co/eDjb9JK1u1 pic.twitter.com/uKduPd1hRR
— Spokesperson, Ministry of Home Affairs (@PIBHomeAffairs) August 17, 2022
Advertisement
ದೆಹಲಿಯ ಬಕ್ಕರ್‌ವಾಲಾ ಪ್ರದೇಶದಲ್ಲಿ ರೋಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್ ನೀಡಲು ಮುಂದಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿ ತಿಳಿಸಿದ್ದರು. ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧವೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ರೋಹಿಂಗ್ಯಾ ಮುಸ್ಲಿಮರಿಂದ ದೇಶದ ಭದ್ರತೆಗೆ ಸಮಸ್ಯೆ ಎಂದು ಹಿಂದೆ ಹೇಳಿದ್ದ ಕೇಂದ್ರ ಈಗ ಫ್ಲ್ಯಾಟ್ ನೀಡುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಜನ ಎತ್ತಿದ್ದರು. ಚರ್ಚೆ ಜಾಸ್ತಿ ಆಗುತ್ತಿದ್ದಂತೆ ಕೇಂದ್ರ ಸರ್ಕಾರ ರೋಹಿಂಗ್ಯಾ ಮುಸ್ಲಿಮರಿಗೆ ಯಾವುದೇ ಫ್ಲ್ಯಾಟ್ ನೀಡುವುದಿಲ್ಲ ಎಂದು ಸ್ಪಷ್ಟನೆ ನೀಡಿ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದಿದೆ.
Advertisement
Advertisement
ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?
ಗೃಹ ಸಚಿವಾಲಯದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 1,100 ರೋಹಿಂಗ್ಯಾ ಮುಸ್ಲಿಮರು ಟೆಂಟ್‌ನಲ್ಲಿ ವಾಸಿಸುತ್ತಿದ್ದು ಅವರನ್ನು ಅಪಾರ್ಟ್‌ಮೆಂಟ್‌ಗೆ ಸ್ಥಳಾಂತರ ಮಾಡಲಾಗುತ್ತದೆ. ಈ ಅಪಾರ್ಟ್‌ಮೆಂಟ್‌ಗೆ ಪೊಲೀಸ್ ರಕ್ಷಣೆ ಒದಗಿಸಲಾಗುತ್ತದೆ. ದೇಶದ ನಿರಾಶ್ರಿತರ ಯೋಜನೆಯನ್ನು ಸಿಎಎಗೆ ಜೋಡಿಸಿ ಸುಳ್ಳು ಹಬ್ಬಿಸಿದವರಿಗೆ ಇದು ಕಹಿ ಸುದ್ದಿ. ಇದನ್ನೂ ಓದಿ: ರೋಹಿಂಗ್ಯಾ ಮುಸ್ಲಿಂ ಉಗ್ರರಿಂದ 28 ಹಿಂದೂಗಳ ಮಾರಣಹೋಮ
ದೇಶದಲ್ಲಿ ಆಶ್ರಯ ಪಡೆದವರನ್ನು ಭಾರತ ಯಾವಾಗಲೂ ಸ್ವಾಗತಿಸುತ್ತದೆ. ಎಲ್ಲಾ ರೋಹಿಂಗ್ಯಾ ನಿರಾಶ್ರಿತರನ್ನು ದೆಹಲಿಯ ಬಕ್ಕರ್ವಾಲಾ ಪ್ರದೇಶದ EWS ಫ್ಲಾಟ್‌ಗಳಿಗೆ ಸ್ಥಳಾಂತರಿಸಲಾಗುವುದು. ಅವರಿಗೆ ಮೂಲಭೂತ ಸೌಕರ್ಯಗಳು, ರಾತ್ರಿಯಿಡೀ ದೆಹಲಿ ಪೊಲೀಸರಿಂದ ಭದ್ರತೆ ನೀಡಲಾಗುತ್ತದೆ. ದೇಶದ ಆಶ್ರಯವನ್ನು ಅರಸಿ ಬಂದವರಿಗೆ ಆಶ್ರಯ ಕೊಡಲಿದ್ದೇವೆ. ಭಾರತ 1951 ರ ನಿರಾಶ್ರಿತರ ಸಮಾವೇಶವನ್ನು ಗೌರವಿಸುತ್ತದೆ. ಜನಾಂಗ, ಧರ್ಮವನ್ನು ಲೆಕ್ಕಿಸದೇ ಎಲ್ಲರಿಗೂ ಆಶ್ರಯ ನೀಡುತ್ತದೆ ಎಂದಿದ್ದರು.
Those who made a career out of spreading canards on India’s refugee policy deliberately linking it to #CAA will be disappointed.
India respects & follows @UN Refugee Convention 1951 & provides refuge to all, regardless of their race, religion or creed.@MIB_India @NBirenSingh pic.twitter.com/6jyMl9dJ7Q
— Hardeep Singh Puri (@HardeepSPuri) August 17, 2022
ಕೇಂದ್ರ ಈ ಹಿಂದೆ ಹೇಳಿದ್ದೇನು?
ಮ್ಯಾನ್ಮಾರ್‌ನಲ್ಲಿ ನೆಲೆಯಿಲ್ಲದೇ ನಿರಾಶ್ರಿತರಾಗಿ ಭಾರತಲ್ಲಿರುವ ರೋಹಿಂಗ್ಯಾ ಮುಸಲ್ಮಾನರಿಗೆ ಆಶ್ರಯ ನೀಡುವುದು ದೇಶದ ಭದ್ರತೆಗೆ ಕಂಟಕವಾಗಲಿದೆ. ಈ ನಿರಾಶ್ರಿತರು ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದಾರೆ. ಇವರನ್ನು ದೇಶದೊಳಗೆ ಇರಲು ಬಿಡುವುದು ದೇಶಕ್ಕೆ ಕಂಟಕವಾಗಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಈ ಹಿಂದೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತ್ತು.
ಪಾಕ್ ಸೇರಿದಂತೆ ಉಗ್ರ ಸಂಘಟನೆ ಜೊತೆ ಈ ಮುಸ್ಲಿಮರು ಸಂಬಂಧ ಹೊಂದಿದ್ದಾರೆ. ದೇಶದಲ್ಲಿ ಕೋಮುವಾದ ಹರಡುತ್ತಿದ್ದಾರೆ. ಭಾರತದಲ್ಲಿ ನಕಲಿ ಗುರುತಿನ ಪತ್ರ ಪಡೆದು ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ.
ಎಲ್ಲ ದೇಶಗಳಂತೆ ವಲಸೆಗೆಂದು ಬರುವ ಜನರ ಮೇಲೆ ನಮಗೆ ಅನುಕಂಪವಿದೆ. ಆದರೆ ವಿಶೇಷವಾಗಿ ಈ ಪ್ರಕರಣದಲ್ಲಿ ದೇಶದ ಭದ್ರತೆ ವಿಚಾರವೂ ಇರುವ ಕಾರಣ ಈ ಅನುಕಂಪ ದುರ್ಬಳಕೆಯಾಗಬಾರದು.
ಗುಪ್ತಚರ ವರದಿಗಳು ಅಧಿಕೃತವಾಗಿ ಪಾಕಿಸ್ತಾನ ಮೂಲದ ಉಗ್ರರು ಮತ್ತು ಇತರ ದೇಶಗಳಲ್ಲಿರುವ ಉಗ್ರರ ಜೊತೆ ರೋಹಿಂಗ್ಯಾ ಮುಸ್ಲಿಮರಿಗೆ ಸಂಪರ್ಕವಿದೆ ಎನ್ನುವ ಮಾಹಿತಿಯನ್ನು ನೀಡಿವೆ. ಅಷ್ಟೇ ಅಲ್ಲದೇ ದೇಶದಲ್ಲಿರುವ ಬೌದ್ಧರ ಮೇಲೆ ಹಿಂಸಾಚಾರ ನಡೆಯುವ ಭೀತಿಯೂ ಇದೆ.
ವಲಸಿಗರ ನೀತಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ನೀತಿಗೆ ಭಾರತ ಬದ್ಧವಾಗಿದೆ. ಆದರೆ ಇದರ ಜೊತೆಗೆ ದೇಶದಲ್ಲಿರುವ ಪ್ರಜೆಗಳ ಮಾನವ ಹಕ್ಕುಗಳ ರಕ್ಷಣೆಯನ್ನು ಕಾಪಾಡುವ ಹೊಣೆಗಾರಿಕೆಯೂ ನಮ್ಮ ಮೇಲಿದೆ ಎಂದು ಅಫಿಡವಿತ್‌ನಲ್ಲಿ ಹೇಳಿತ್ತು.
ಏನಿದು ಪ್ರಕರಣ?
ಮ್ಯಾನ್ಮಾರ್ ದೇಶದ ದಕ್ಷಿಣದಲ್ಲಿರುಗ ರಾಖೈನ್ ರಾಜ್ಯದಲ್ಲಿ ರೋಹಿಂಗ್ಯಾ ಜನರಿದ್ದಾರೆ. ಬೌದ್ಧರೆ ಹೆಚ್ಚಾಗಿರುವ ಈ ದೇಶದಲ್ಲಿ ಈಗ ರೋಹಿಂಗ್ಯಾ ಮುಸ್ಲಿಮರ ಮೇಲೆ ದೌರ್ಜನ್ಯ ಆಗುತ್ತಿದ್ದು ಭಾರತ, ಬಾಂಗ್ಲಾದೇಶಕ್ಕೆ ವಲಸೆ ಬರುತ್ತಿದ್ದಾರೆ. ಭದ್ರತೆ ವಿಚಾರವನ್ನು ಇಟ್ಟುಕೊಂಡು ಕೇಂದ್ರ ಸರ್ಕಾರ ವಲಸೆಗಾರರನ್ನು ದೇಶದಿಂದ ಹೊರ ಹಾಕಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಇಬ್ಬರು ರೋಹಿಂಗ್ಯ ಮುಸ್ಲಿಮರು ಸುಪ್ರೀಂ ಮೊರೆ ಹೋಗಿ, ನಮಗೆ ಭಾರತದಲ್ಲಿ ನಿರಾಶ್ರಿತರ ಮಾನ್ಯತೆಯನ್ನು ನೀಡಬೇಕು ಎಂದು ಮನವಿ ಮಾಡಿದ್ದರು.