ತುಮಕೂರು: ಸಿದ್ದಗಂಗಾ ಶ್ರೀಗಳ 11ನೇ ದಿನದ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಭಕ್ತರು ಹಾಕಿಕೊಂಡ ಅನ್ನವನ್ನು ವ್ಯರ್ಥ ಮಾಡದೇ ತಟ್ಟೆಯನ್ನು ಖಾಲಿ ಮಾಡಿ ಸಂತಸಪಟ್ಟಿದ್ದಾರೆ.
ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ವೇಳೆ ಅನ್ನ ಎಸೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಭಕ್ತರೊಬ್ಬರಿಗೆ ಮಠದ ವಿದ್ಯಾರ್ಥಿ ಅನ್ನದ ಮಹತ್ವವನ್ನು ತಿಳಿಸಿದ್ದ ವಿಡಿಯೋ ಒಂದು ವೈರಲ್ ಆಗಿತ್ತು. ಈ ವಿಡಿಯೋದ ಪ್ರಭಾವ ಏನೋ ಎಂಬಂತೆ ಭಕ್ತರು ಇಂದು ಎಷ್ಟು ಅನ್ನಬೇಕೋ ಅಷ್ಟೇ ಪ್ರಮಾಣದ ಅನ್ನವನ್ನು ಹಾಕಿಕೊಂಡು ತಿಂದಿದ್ದಾರೆ. ಇದನ್ನು ಓದಿ: ಅನ್ನ ಚೆಲ್ಲಲು ಬಂದ ಭಕ್ತನಿಗೆ ಮಠದ ವಿದ್ಯಾರ್ಥಿಯಿಂದ ಅನ್ನದ ಪಾಠ! – ವಿಡಿಯೋ ನೋಡಿ
Advertisement
Advertisement
ಪುಣ್ಯಾರಾಧನೆಗೆ ಆಗಮಿಸಿದ 5 ಲಕ್ಷ ಭಕ್ತರಿಗಾಗಿ ನಿರಂತರವಾಗಿ ವಿವಿಧ ರೀತಿಯ ಪ್ರಸಾದವನ್ನು ತಯಾರಿಸಲಾಗುತ್ತಿದೆ. ಮಠದ ಆವರಣದಲ್ಲಿ ವಿವಿಧ ರೀತಿಯ ಪ್ರಸಾದವನ್ನು ಸಿದ್ಧ ಮಾಡುತ್ತಿದ್ದಾರೆ. ನೂರಾರು ಭಕ್ತರು ಸ್ವಯಂ ಪ್ರೇರಿತವಾಗಿ ದಾಸೋಹದ ಸಿದ್ಧತಾ ಕಾರ್ಯದಲ್ಲಿ ರಾತ್ರಿಯಿಡಿ ತೊಡಗಿಕೊಂಡಿದ್ದರು. ಈಗಾಗಲೇ 69 ಕ್ವಿಂಟಾಲ್ ಸಿಹಿ ಬೂಂದಿ ತಯಾರಿಸಲಾಗಿದೆ. ಇದನ್ನು ಓದಿ: ಜನ ಈಗ ಸಾಹುಕಾರರಾಗಿದ್ದಾರೆ, ಹೀಗಾಗಿ ಅನ್ನದ ಬೆಲೆ ಗೊತ್ತಿಲ್ಲ: ಸಿದ್ದಗಂಗಾ ಮಠದ ವಿದ್ಯಾರ್ಥಿ
Advertisement
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ವೇಳೆ ಭಕ್ತಾದಿಗಳಿಗೆ ಅನ್ನದಾಸೋಹ ಮಾಡಲಾಗಿತ್ತು. ಈ ವೇಳೆ ಭಕ್ತರೊಬ್ಬರು ಅನ್ನ ಚೆಲ್ಲಲು ಮುಂದಾದಾಗ ಮಠದ ಬಾಲಕ ಶಿವು ಅವರಿಗೆ ಅನ್ನದ ಮಹತ್ವವನ್ನು ತಿಳಿಸಿದ್ದನು. ಶ್ರೀಗಳ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಉಚಿತ ಅನ್ನದಾಸೋಹ ಸಂದರ್ಭದಲ್ಲಿ ಮೇಲುಸ್ತುವಾರಿ ಮಾಡುತ್ತಿದ್ದ ಮಠದ ವಿದ್ಯಾರ್ಥಿ, ಅನ್ನದ ಮಹತ್ವ ತಿಳಿಸಿಕೊಟ್ಟಿದ್ದನು. ಅಲ್ಲದೇ ಪ್ರಸಾದ ಚೆಲ್ಲಬೇಡಿ, ಮುಂದೆ ಅನ್ನ ಸಿಗದ ಕಾಲ ಬರುತ್ತೆ ಎಂದು ವಿದ್ಯಾರ್ಥಿ ಹೇಳಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
Advertisement
https://www.youtube.com/watch?v=Ku2W_RqZM9M
https://www.youtube.com/watch?v=5uh3fpEysn8
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv