ಮತ್ತೊಂದು ಎಡವಟ್ಟು ಮಾಡಿಕೊಂಡ ಗುಲ್ಬರ್ಗ ವಿಶ್ವವಿದ್ಯಾಲಯ!

Public TV
1 Min Read
GLB VV

ಕಲಬುರಗಿ: ಜಿಲ್ಲೆಯ ಗುಲ್ಬರ್ಗ ವಿಶ್ವವಿದ್ಯಾಲಯ ಸದಾ ಒಂದಿಲ್ಲವೊಂದು ವಿವಾದಗಳಿಗೆ ಗುರಿಯಾಗುತ್ತಲೆ ಇರುತ್ತದೆ. ಈಗ ಮತ್ತೆ ಈ ವಿಶ್ವವಿದ್ಯಾಲಯ ಎಡವಟ್ಟು ಮಾಡಿಕೊಂಡಿದೆ.

ಇಷ್ಟು ದಿನ ಪ್ರಶ್ನೆ ಪತ್ರಿಕೆಗಳ ಸೋರಿಕೆಯಿಂದ ಅಪಖ್ಯಾತಿಗೆ ಒಳಗಾಗಿತ್ತು. ಇದೀಗ ಪ್ರಸಕ್ತ ಸಾಲಿನ ಬಿಎ, ಬಿಎಸ್ಸಿ, ಬಿಕಾಂ, ಬಿಸಿಎ, ಬಿಎಸ್‍ಡಬ್ಲ್ಯು, ಬಿಬಿಎಮ್ ಎರಡನೇ, ನಾಲ್ಕನೇ ಹಾಗೂ ಆರನೇ ಸೆಮಿಸ್ಟರ್ ನ ಕನ್ನಡ ಪ್ರಶ್ನೆಪತ್ರಿಕೆಗಳನ್ನ ಮುದ್ರಣಕ್ಕೆ ವಿಳಂಬಮಾಡಿದೆ. ಇದರಿಂದ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಿದೆ.

ಗುಲ್ಬರ್ಗ ವಿವಿ ವ್ಯಾಪ್ತಿಯ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳ ಪದವಿ ಪರೀಕ್ಷೆಗಳನ್ನ ಮುಂದಿನ ದಿನಾಂಕ ನಿಗದಿ ಪಡಿಸದೆ ಪೋಸ್ಟ್ ಪೋನ್ ಮಾಡಲಾಗಿದೆ. ಆದರೆ ವಿಶ್ವವಿದ್ಯಾಲಯದ ಅಧಿಕಾರಿಗಳ ಈ ಕ್ರಮಕ್ಕೆ ಸಾರ್ವಜನಿಕ ಹಾಗೂ ವಿದ್ಯಾರ್ಥಿ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಮುದ್ರಣ ಮಾಡುವುದಕ್ಕೆ ಸಮಯವಿಲ್ಲವಾದರೇ, ವಿವಿ ಶೈಕ್ಷಣಿಕ ವ್ಯವಸ್ಥೆ ಹೇಗೆ ಸುಧಾರಿಸುತ್ತಾರೆ ಎಂಬ ಪ್ರಶ್ನೆ ಕಾಡಲಾರಂಭಿಸಿದೆ.

Share This Article
Leave a Comment

Leave a Reply

Your email address will not be published. Required fields are marked *