– ಸೈನಿಕರ ಆಹಾರದಲ್ಲಿ ವಿಷ ಬೆರೆಸಲು ಪಾಕ್ ತಂತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ದಾಳಿ ಮಾಡಿ 40 ಭಾರತೀಯ ಯೋಧರನ್ನು ಬಲಿಪಡೆದಿದ್ದ ಸ್ಥಳದಲ್ಲಿ ಮತ್ತೆ ಬಾಂಬ್ ಸ್ಫೋಟವಾಗಿದೆ.
ಪುಲ್ವಾಮಾ ಜಿಲ್ಲೆಯ ತ್ರಾಲ್‍ನಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಬ್ಲಾಸ್ಟ್ ಮಾಡಿದ್ದು, ಮಿಲಿಟರಿಯನ್ನು ಟಾರ್ಗೆಟ್ ಮಾಡಿ ಭಯೋತ್ಪಾದಕರು ಬಾಂಬ್ ಸ್ಫೋಟಿಸಿದ್ದಾರೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಬಾಂಬ್ ಸ್ಫೋಟವಾಗಿದೆ ಎಂದು ಹೇಳಲಾಗುತ್ತಿದೆ.
Advertisement
Advertisement
ಈ ಸ್ಫೋಟದಿಂದ ಓರ್ವ ನಾಗರಿಕನಿಗೆ ಗಾಯವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ. ಕಳೆದ ದಿನವಷ್ಟೆ ಶಾಂತಿ ಸ್ಥಾಪನೆಗಾಗಿ ವಿಂಗ್ ಕಮಾಂಡರ್ ಅಭಿನಂದನ್ ಬಿಡುಗಡೆ ಮಾಡುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರು. ಕೊನೆಗೆ ಸತಾಯಿಸಿ ಸತಾಯಿಸಿ ಶುಕ್ರವಾರ ರಾತ್ರಿ 9 ಗಂಟೆಯ ಸುಮಾರಿಗೆ ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಿದ್ದರು. ಆದರೆ ಪಾಪಿ ಪಾಕಿಸ್ತಾನ ಮತ್ತೆ ಬಾಂಬ್ ಸ್ಫೋಟ ಮಾಡುವ ಮೂಲಕ ತನ್ನ ಕುತಂತ್ರ ಬುದ್ಧಿಯನ್ನು ತೋರಿಸಿದೆ.
Advertisement
ವಿಷ ಬೆರೆಸಲು ತಂತ್ರ:
ಫೆಬ್ರವರಿ 14 ರಂದು ಸೈನಿಕರು ಹೋಗುತ್ತಿದ್ದ ವಾಹನಗಳ ಮೇಲೆ ಉಗ್ರ ದಾಳಿ ಮಾಡಿದ್ದನು. ಇದರಿಂದ 40 ಯೋಧರು ಹುತಾತ್ಮರಾಗಿದ್ದರು. ಆದರೆ ಈಗ ಮತ್ತೆ ಪಾಕಿಸ್ತಾನ ಬಾಂಬ್ ದಾಳಿ ಮಾಡಿದೆ. ಇನ್ನೊಂದು ಕಡೆ ಪಾಕಿಸ್ತಾನ ಭಾರತದ ಸೈನಿಕರ ಹತ್ಯೆಗೆ ಸಂಚು ಮಾಡಿದ್ದು, ಸೈನಿಕರ ಆಹಾರದಲ್ಲಿ ವಿಷ ಬೆರೆಸಲು ಪಾಕಿಸ್ತಾನ ಕುತಂತ್ರ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
ಪಾಕಿಸ್ತಾನ ಸೇನಾ ಶಿಬಿರಗಳಲ್ಲಿರುವ ಆಹಾರ ಡಿಪೋದಲ್ಲಿ ವಿಷ ಬೆರೆಸಲು ಪಿತೂರಿ ಮಾಡಿದ್ದು, ಇದನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‍ಐ ಜೊತೆ ಸೇರಿ ಸಂಚು ರೂಪಿಸಿದೆ ಎಂದು ಹೇಳಲಾಗುತ್ತಿದೆ. ಕಾಶ್ಮೀರದಲ್ಲಿರುವ ಭಯೋತ್ಪಾದಕರು ವಿಷ ಬೆರೆಸಬಹುದು ಎಂದು ಪಡಿತರ ಡಿಪೋಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv