ಉಡುಪಿ/ಮಂಗಳೂರು: ಮಂಗಳವಾರ ಭಾರೀ ಅವಾಂತರ ಸೃಷ್ಟಿಸಿದ್ದ ಮಳೆ ಉಡುಪಿ ಹಾಗೂ ದಕ್ಷಿಣ ಕ್ನಡ ಜಿಲ್ಲೆಯಲ್ಲಿ ಇಂದೂ ಕೂಡ ಮುಂದುವರೆದಿದೆ. ಕಳೆದ ರಾತ್ರಿ ಕೊಂಚ ಕಡಿಮೆಯಾಗಿದ್ದ ಮಳೆ ಆರ್ಭಟ ಬೆಳಗ್ಗೆ ಮತ್ತೆ ಶುರುವಾಗಿದೆ.
ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಕಾರ್ಮೋಡದ ಆವರಿಸಿದೆ. ವಾತಾವರಣ ನೋಡುವಾಗ ದಿನಪೂರ್ತಿ ಮಳೆಯಾಗುವ ಸಾಧ್ಯತೆಯಿದೆ. ಕಾರ್ಕಳ ತಾಲೂಕಿನಲ್ಲಿ ವಿಪರೀತ ಜಡಿಮಳೆಯಾಗುತ್ತಿದ್ದು, ನದಿಗಳಲ್ಲಿ ನೀರು ಹರಿಯುತ್ತಿದೆ. ಮೀನುಗಾರರಿಗೆ ಹಾಗೂ ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ ಸಂದೇಶ ರವಾನೆ ಮಾಡಲಾಗಿದೆ. ಇದನ್ನೂ ಓದಿ: ನೀರುಪಾಲಾದ ಬಾಲೆ ಶವವಾಗಿ ಪತ್ತೆ – ಮುಗಿಲುಮುಟ್ಟಿದ ಹೆತ್ತವರ ಆಕ್ರಂದನ
Advertisement
ಮುಂದಿನ ಸೂಚನೆ ನೀಡುವವರೆಗೆ ಕಡಲಿಗೆ ಇಳಿಯಕೂಡದು ಅಂತ ಆದೇಶ ಮಾಡಿದೆ. ಸಾರ್ವಜನಿಕರು ಅಪಾಯವಿರುವಲ್ಲಿ ಜಾಗರೂಕತೆ ವಹಿಸಬೇಕು ಅಂತ ಪ್ರಕಟಣೆ ಹೊರಡಿಸಿದೆ. ಕುಂದಾಪುರ, ಕಾಪು ಬೈಂದೂರಲ್ಲಿ ಭಾರೀ ಮಳೆ ಸುರಿಯುತ್ತಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಉಡುಪಿಯ ಬೈಲಕರೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ತೊರೆಗಳು ತುಂಬಿ ಹರಿಯುತ್ತಿವೆ.
Advertisement
ಮಂಗಳೂರಲ್ಲಿ ಕೂಡ ಮತ್ತೆ ಮಳೆ ಆರಂಭವಾಗಿದ್ದು, ತಗ್ಗು ಪ್ರದೇಶಗಳಿಗೆ ಮತ್ತೆ ನೀರು ನುಗ್ಗುವ ಆತಂಕ ಎದುರಾಗಿದೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹದ ನೀರು ಇನ್ನೂ ಹರಿದು ಹೋಗಿಲ್ಲ. ಹೀಗಾಗಿ ಇದೀಗ ಮತ್ತೆ ಮಳೆ ಸುರಿಯಲಾರಂಭಿಸಿದ್ದು, ನಗರವಾಸಿಗಳು ಆತಂಕಕ್ಕೀಡಾಗಿದ್ದಾರೆ. ಮಳೆ ನಡುವೆಯೇ ಅಗ್ನಿಶಾಮಕದಳ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನೂ ಓದಿ: ಭಾರೀ ಮಳೆಯಿಂದಾಗಿ ರೈಲು ಹಳಿಗಳಲ್ಲಿ ಭೂಕುಸಿತ- ವಿಮಾನ ಹಾರಾಟದಲ್ಲಿ ವ್ಯತ್ಯಯ
Advertisement
ನಿನ್ನೆಯ ಮಹಾ ಮಳೆಗೆ ಇಬ್ಬರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಕುಟುಂಬಗಳಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗಿದೆ. ಕೆಪಿಟಿ ಬಳಿಯ ಉದಯನಗರದಲ್ಲಿಧರೆ ಕುಸಿದು ಸಾವನ್ನಪ್ಪಿದ್ದ ಮೋಹಿನಿ (55) ಹಾಗೂ ಮನೆಗೆ ನೀರು ನುಗ್ಗಿ ನೀರಲ್ಲಿ ಮುಳುಗಿ ಸಾವನ್ನಪ್ಪದ್ದ ವೃದ್ಧೆ ಮುಕ್ತಾ ಭಾಯಿ(80) ಇಬ್ಬರಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪರಿಹಾರ ನೀಡಿದ್ದಾರೆ. ಇದನ್ನೂ ಓದಿ: ಕರಾವಳಿ ಮಳೆ – ಅಧಿಕಾರಿಗಳ ಜೊತೆ ಮಾತನಾಡಿದ ಮೋದಿ