– ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಹೋರಾಟಕ್ಕೆ ಬಿಜೆಪಿ ಬೆಂಬಲವಿದೆ ಎಂದ ಪ್ರತಿಪಕ್ಷ ನಾಯಕ
ಬೆಂಗಳೂರು: ಅರವಿಂದ ಕೇಜ್ರಿವಾಲ್ (Arvind Kejriwal) ಬಹಳ ದಿನ ಜೈಲಿನಲ್ಲಿ ಇದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashoka) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ (PM Candidate) ಯಾರೆಂದು ಅವರಿಗೇ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್ ನೀಡಲಾಗುತ್ತಿದೆ. ಟಿಕೆಟ್ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್‌ನವರೇ (Congress) ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್ ಅವರು ಮರಳಿ ಜೈಲಿಗೆ ಹೋಗಬೇಕಿದೆ, ಅವರು ಮತ್ತೆ ಬಿಡುಗಡೆಯಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಕೇಜ್ರಿವಾಲ್ ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ (Supreme Court) ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದು ಕುಟುಕಿದರು. ಇದನ್ನೂ ಓದಿ: ಪೆನ್‍ಡ್ರೈವ್ ಕೇಸ್: ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ಮುಗಿಸುವ ಪ್ರಯತ್ನ ಮಾಡಿದ್ದಾರೆ – ಎ.ಮಂಜು
Advertisement
ವಿಧಾನಪರಿಷತ್ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕೇಂದ್ರದ ನಾಯಕರು ನಿರ್ಧಾರ ಮಾಡಿದ್ದಾರೆ. ಇದರಲ್ಲಿ ರಾಜ್ಯದ ನಾಯಕರ ಪಾತ್ರವಿಲ್ಲ ಎಂದು ಹೇಳಿದರು.
Advertisement
ಇದೇ ವೇಳೆ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಸಹ ಹೇಳಿದರು. ಇದನ್ನೂ ಓದಿ: ರಸ್ತೆಯಲ್ಲಿ ಸಿಕ್ಕ ಪೆನ್‌ಡ್ರೈವ್ ಎ.ಮಂಜುಗೆ ಕೊಟ್ಟಿದ್ದೆ; ಬಾಂಬ್ ಸಿಡಿಸಿದ ಆರೋಪಿ ನವೀನ್‌ಗೌಡ!
ಎಸ್.ಎಂ.ಕೃಷ್ಣ ಆರೋಗ್ಯ ವಿಚಾರಿಸಿದ ಆರ್.ಅಶೋಕ್
ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಿಚಾರಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ನಮ್ಮ ನಾಡಿನ ಮುತ್ಸದ್ಧಿಯಾಗಿದ್ದು, ದೇವರ ಆಶೀರ್ವಾದ ಇದೆ. ನಾವು ಕೂಡ ಅವರ ಆರೋಗ್ಯಕ್ಕೆ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ.