ಪಾಟ್ನಾ: ಸರ್ಕಾರ ಪ್ರಾರಂಭಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ, ಬಿಹಾರದಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಈ ಯೋಜನೆಯನ್ನು ವಿದ್ಯಾರ್ಥಿಗಳು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಪ್ರತಿಭಟನೆಯನ್ನು ಈಗಿಂದೀಗಲೇ ಹಿಂತೆಗೆದುಕೊಳ್ಳಬೇಕು ಎಂದು ಬಿಹಾರದ ಉಪ ಮುಖ್ಯಮಂತ್ರಿ ತಾರ್ಕಿಶೋರ್ ಪ್ರಸಾದ್ ಹೇಳಿದ್ದಾರೆ.
Advertisement
ಮಾಧ್ಯಮದೊಂದಿಗೆ ಮಾತನಾಡಿದ ಪ್ರಸಾದ್, ವಿದ್ಯಾರ್ಥಿಗಳು ಈ ಯೋಜನೆಯನ್ನು ಅರ್ಥ ಮಾಡಿಕೊಂಡಿದ್ದಾರೆ ಅಥವಾ ಗೊಂದಲಕ್ಕೊಳಗಾಗಿದ್ದಾರೆ ಎಂದು ಭಾವಿಸುವುದು ಬೇಡ. ಈ ಯೋಜನೆ ಬಗ್ಗೆ ರಾಜ್ಯ ಹಾಗೂ ಕೇಂದ್ರಗಳೆರಡೂ ಗಂಭೀರವಾಗಿವೆ. ಈ ಯೋಜನೆಯನ್ನು ಸಕಾರಾತ್ಮಕವಾಗಿ ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ ಹಾಗೂ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಿ ಎಂದು ಹೇಳಿದರು. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಕಿಚ್ಚು – 22 ರೈಲುಗಳ ಸಂಚಾರ ರದ್ದು
Advertisement
ಅಗ್ನಿಪಥ್ ಯೋಜನೆ ವಿಚಾರವಾಗಿ ಬಿಹಾರದಲ್ಲಿ ವಿದ್ಯಾರ್ಥಿಗಳ ಆಕ್ರೋಶ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರ ಗುಂಪೊಂದು ವಿಧ್ವಂಸಕ ಕೃತ್ಯ ಎಸಗಿದೆ. ಈ ಕ್ರಮದ ವಿರುದ್ಧ ಆಕ್ರೋಶವನ್ನು ಹೊರಹಾಕಲು ರೈಲಿಗೆ ಬೆಂಕಿ ಹಚ್ಚಿದ್ದಾರೆ. ದೆಹಲಿ, ಉತ್ತರ ಪ್ರದೇಶ ಹಾಗೂ ಹರಿಯಾಣ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.
Advertisement
Advertisement
ಪ್ರತಿಭಟನೆ ಏಕೆ?
ವಿದ್ಯಾರ್ಥಿಗಳು ನಿಗದಿತ 4 ವರ್ಷ ಅವಧಿಯ ಯೋಜನೆ ವಿಚಾರವಾಗಿ ಪ್ರಾಥಮಿಕವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಯೋಜನೆ ಅಡಿಯಲ್ಲಿ ಕೇಂದ್ರ ರಾಷ್ಟ್ರೀಯ ಭದ್ರತೆಗಾಗಿ ಪ್ರಾಣವನ್ನೇ ಪಣಕ್ಕಿಡಲು ಸಿದ್ಧರಿರುವರಿಂದ ಪ್ರಯೋಜನಗಳನ್ನು ಕಡಿತಗೊಳಿಸುತ್ತದೆ ಎಂದು ವಾದಿಸಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ