ಲಕ್ನೋ: ಅಗ್ನಿಪಥ್ ಯೋಜನೆಯ ವಿರುದ್ಧ ಉತ್ತರ ಪ್ರದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಹಲವಾರು ಸ್ಥಳಗಳಲ್ಲಿ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಇಂತಹ ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರ ಮನೆಗಳನ್ನು ಬುಲ್ಡೋಜರ್‌ಗಳಿಂದ ಧ್ವಂಸಗೊಳಿಸಿ ಯೋಗಿ ಸರ್ಕಾರ ಈಗಾಗಲೇ ಬಿಸಿ ಮುಟ್ಟಿಸಿತ್ತು. ಈ ಬಾರಿ ವಾರಣಾಸಿ ಆಡಳಿತ ಒಂದು ಹೆಜ್ಜೆ ಮುಂದೆ ಹೋಗಿ, ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಆಸ್ತಿಯನ್ನು ನಾಶಪಡಿಸಿದವರಿಂದ ಪರಿಹಾರವನ್ನು ವಸೂಲಿ ಮಾಡುವುದಾಗಿ ಹೇಳಿದೆ. ಇದನ್ನೂ ಓದಿ: ಇಡಿಯಿಂದ ಮುಂದುವರಿದ ವಿಚಾರಣೆ- ಅರೆಸ್ಟ್ ಆಗ್ತಾರಾ ರಾಹುಲ್ ಗಾಂಧಿ..?
Advertisement
Advertisement
ವಾರಣಾಸಿ ಆಡಳಿತ ಅಗ್ನಿಪಥ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸುವ ಕೆಲಸವನ್ನು ಈಗಾಗಲೇ ಪ್ರಾರಂಭಿಸಿದೆ. ಈ ಕೆಲಸ ಮುಗಿದ ಬಳಿಕ ಹಾನಿಯಾದ ಸಾರ್ವಜನಿಕ ಆಸ್ತಿಯನ್ನು ಸರಿಪಡಿಸಲು ಪ್ರತಿಭಟನಾಕಾರರಿಂದಲೇ ವಸೂಲಿ ಮಾಡಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಶಿಂಧೆ ವಾಪಸಾಗ್ತಾರೆ: ತುರ್ತು ಸಭೆಯಲ್ಲಿ ಶಾಸಕರಿಗೆ ಉದ್ಧವ್ ಠಾಕ್ರೆ ಮಾಹಿತಿ
Advertisement
ಪ್ರತಿಭಟನೆ ಸಮಯದಲ್ಲಿ ನಾಶವಾಗಿರುವ ಸರ್ಕಾರಿ ಆಸ್ತಿಗಳ ಪಟ್ಟಿಯನ್ನು ಹಾಗೂ ಕೃತ್ಯದಲ್ಲಿ ತೊಡಗಿದವರಿಂದ ಪರಿಹಾರ ಸಂಗ್ರಹಿಸಲು ಸಿದ್ಧತೆ ನಡೆಯುತ್ತಿದೆ. ಕೃತ್ಯದಲ್ಲಿ ಭಾಗಿಯಾಗಿರುವವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸರ್ಕಾರಿ ಅಧಿಕಾರಿಗಳಿಂದ ಸಂಗ್ರಹಿಸಲಾಗುತ್ತದೆ ಎಂದು ವಾರಣಾಸಿ ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ.