ಪಾಟ್ನಾ: ಹೊಸ ಸೇನಾ ನೇಮಕಾತಿ ನೀತಿ ಅಗ್ನಿಪಥ್ ವಿರುದ್ಧ ಪ್ರತಿಭಟನೆಯ ನಡುವೆ ಇಂದು ಬೆಳಗ್ಗೆ ಬಿಹಾರದಲ್ಲಿ ಜನರ ಗುಂಪೊಂದು ಮತ್ತೇ ಪ್ಯಾಸೆಂಜರ್ ರೈಲಿನ 2 ಬೋಗಿಗಳಿಗೆ ಬೆಂಕಿ ಹಚ್ಚಿದೆ.
ಹೊಸ ಸೇನಾ ನೇಮಕಾತಿ ನೀತಿಯ ವಿರುದ್ಧ ಬಿಹಾರ ಮತ್ತು ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿವೆ. ಇಂದು ಜಮ್ಮು ತಾವಿ ಎಕ್ಸ್‌ಪ್ರೆಸ್ ರೈಲಿನ ಕೋಚ್‍ಗಳಿಗೆ ಹಾಜಿಪುರ್-ಬರೌನಿ ರೈಲು ಮಾರ್ಗದ ಮೊಹಿಯುದ್ದಿನಗರ ನಿಲ್ದಾಣದಲ್ಲಿ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಇದನ್ನೂ ಓದಿ: ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಬಗ್ಗೆ ಕ್ರಮಕೈಗೊಳ್ಳಿ – ರಾಷ್ಟ್ರಪತಿಗೆ ಭಜರಂಗದಳದಿಂದ ಪತ್ರ
Advertisement
Advertisement
ಇಂದು ಬೆಳಗ್ಗೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ರೈಲು ನಿಲ್ದಾಣಕ್ಕೆ ನುಗ್ಗಿದ ಗುಂಪೊಂದು ರೈಲನ್ನು ಧ್ವಂಸಗೊಳಿಸಿ, ರೈಲ್ವೆ ನಿಲ್ದಾಣದ ಆಸ್ತಿಯನ್ನು ಹಾನಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಯೋಗ ಮಾಡಿದೆ.
Advertisement
ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರವು ಅಗ್ನಿಪಥ್ ನೇಮಕಾತಿಯ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸಿದೆ. ಇದನ್ನೂ ಓದಿ: ಇಡಿಯಿಂದ ರಾಹುಲ್ ಗಾಂಧಿಗೆ 3 ದಿನ ರಿಲೀಫ್