ಬೆಳಗಾವಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್‍ಗೆ ಕರೆ ನೀಡಿದೆ. ಈ ಹಿನ್ನೆಲೆ ಬೆಳಗಾವಿ ನಗರ ಹಾಗೂ ಜಿಲ್ಲಾ ಪೊಲೀಸರು ಬಿಗಿ ಭದ್ರತೆ ವಹಿಸಿದ್ದು, ರ‍್ಯಾಪಿಡ್ ಆಕ್ಷನ್ ಫೋರ್ಸ್ ಪಂಥ ಸಂಚಲನ ನಡೆಸಿದೆ.
Advertisement
ವಾಟ್ಸಪ್ ಮೂಲಕ ಬೆಳಗಾವಿ ಬಂದ್‍ಗೆ ಅನಾಮಧೇಯ ಸೇನಾ ಆಕಾಂಕ್ಷಿ ಯುವಕರ ಆಹ್ವಾನ ಹಿನ್ನೆಲೆ ಬೆಳಗಾವಿ ನಗರ, ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ. ಈಗಾಗಲೇ ಸಂದೇಶ ರವಾನೆ ಮಾಡಿದ್ದ ಯುವಕರನ್ನ ಕರೆಯಿಸಿ ಪೊಲೀಸರು ಖಡಕ್ ವಾರ್ನಿಂಗ್ ಸಹ ಕೊಟ್ಟಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಪ್ರತಿಭಟನೆಗಳ ನಡುವೆ, ಅಗ್ನಿವೀರರಿಗೆ ಆನಂದ್ ಮಹೀಂದ್ರಾ ಕೊಟ್ರು ಬಿಗ್ ಆಫರ್
Advertisement
Advertisement
ಸೇನಾಕಾಂಕ್ಷಿಗಳು, ಕೋಚಿಂಗ್ ಸೆಂಟರ್ ಮುಖ್ಯಸ್ಥರಿಂದ ಬಂದ್ ಮಾಡದಂತೆ ವೀಡಿಯೋ ಹೇಳಿಕೆ ರಿಲೀಸ್ ಮಾಡಲಾಗಿದೆ. ಬೆಳಗಾವಿ ನಗರ ಸಂಪರ್ಕ ಕಲ್ಪಿಸುವ ಮಾರ್ಗಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ, ಟೋಲ್‍ಗಳಲ್ಲಿ ಬಿಗಿ ಬಂದೋಬಸ್ತ್ ಮಾಡುವ ಮೂಲಕ ಬೆಳಗಾವಿಗೆ ಬರುವ ಯುವಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಇದರ ಜೊತೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ವತಿಯಿಂದ ಎಸ್‍ಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಗೋಕಾಕ್ ನಗರದಲ್ಲಿ ಪಥಸಂಚಲನ ಮಾಡುವ ಮೂಲಕ ಪ್ರತಿಭಟನೆ ಮಾಡುವ ಯುವಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
Advertisement
ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಪಥಸಂಚಲನ
ಬೆಳಗಾವಿಯಲ್ಲಿ ಅಗ್ನಿಪಥ್ ವಿರೋಧಿಸಿ ಬೆಳಗಾವಿ ಬಂದ್ ಕರೆ ಹಿನ್ನೆಲೆ ನಗರದ ಚೆನ್ನಮ್ಮ ವೃತ್ತದಲ್ಲಿ ರೈಲ್ವೆ ಪೊಲೀಸರು, ರ‍್ಯಾಪಿಡ್ ಆಕ್ಷನ್ ಫೋರ್ಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ಇದಾದಬಳಿಕ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ನೇತೃತ್ವದಲ್ಲಿ ನಗರದ ಚೆನ್ನಮ್ಮ ವೃತ್ತದಿಂದ ರೈಲ್ವೆ ಪೊಲೀಸರು, ರ‍್ಯಾಪಿಡ್ ಆಕ್ಷನ್ ಫೋರ್ಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.
ಬೆಳಗಾವಿಯ ರಾಣಿ ಚನ್ನಮ್ಮಾಜಿ ವೃತ್ತದಿಂದ ಆರಂಭವಾದ ಪಥಸಂಚಲನ ಲಿಂಗರಾಜು ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ಸರ್ಕಲ್, ಕಿರ್ಲೋಸ್ಕರ್ ರೋಡ್, ರಾಮದೇವ ಗಲ್ಲಿ, ಖಡೇ ಬಜಾರ್ ಬಳಿಕ ಅಂತಿಮವಾಗಿ ಚೆನ್ನಮ್ಮಾಜಿ ವೃತ್ತಕ್ಕೆ ಆಗಮಿಸಿ ಅಂತ್ಯವಾಯಿತು. ಪರೇಡ್‍ನಲ್ಲಿ ಸ್ವತಃ ಬೋರಲಿಂಗಯ್ಯ ಅವರು ಹೆಜ್ಜೆ ಹಾಕಿದ್ರು. ಕಮಿಷನರ್‌ಗೆ ಡಿಸಿಪಿ ರವೀಂದ್ರ ಗಡಾದಿ, ಎಸಿ ರವೀಂದ್ರ ಕರಿಲಿಂಗನ್ನವರ, ಎಸಿಪಿ ಚಂದ್ರಪ್ಪ, ಸಿಪಿಐ ಧೀರಜ ಶಿಂಧೆ, ಸಿಪಿಐ ದಿಲೀಪ ನಿಂಬಾಳ್ಕರ್, ಸಿಪಿಐ ರಾಘವೇಂದ್ರ ಹವಾಲ್ದಾರ್ ಸೇರಿದಂತೆ ಇನ್ನಿತರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಹುಕ್ಕೇರಿ, ಹಿರೇಬಾಗೆವಾಡಿ ಚೆಕ್ ಪೋಸ್ಟ್‌ನಲ್ಲಿ ಹೈ ಅಲರ್ಟ್:
ಬೆಳಗಾವಿ ಚಲೋ, ಬೆಳಗಾವಿ ಬಂದ್‍ಗೆ ಕರೆ ಹಿನ್ನೆಲೆ ಬೆಳಗಾವಿ ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹೈ ಅಲರ್ಟ ಘೋಷಣೆ ಮಾಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಹುಕ್ಕೇರಿ ತಾಲೂಕಿನ ಹತ್ತರಗಿ ಚೆಕ್ ಹಾಗೂ ನಿಪ್ಪಾಣಿ ತಾಲೂಕಿನ ಕುಗನೊಳ್ಳಿಯಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಇದರ ಜೊತೆಗೆ ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಚೆಕ್ ಪೋಸ್ಟ್‌ನಲ್ಲಿ ಬೆಳಗಾವಿಗೆ ಬರುವ ಯುವಕರನ್ನು ತಡೆಯಲು ಸಜ್ಜಾಗಿದ್ದು, ಬೆಳಗಾವಿ ನಗರಕ್ಕೆ ಬರುವ ಯುವಕರನ್ನು ಅಲ್ಲಿಯೇ ತಡೆದು ವಾಪಸ್ ಕಳಿಸಲು ನಿರ್ಧರಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕ ಅರೆಸ್ಟ್
ಕುಂದಾನಗರಿ ಬೆಳಗಾವಿಯಲ್ಲಿ ಎಂದಿನಂತೆ ಜನಜೀವನ
ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್ ಕರೆ ಹಿನ್ನೆಲೆ ಕುಂದಾನಗರಿ ಬೆಳಗಾವಿಯಲ್ಲಿ ಎಂದಿನಂತೆ ಜನಜೀವನ ನಡೆದಿದೆ. ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ನಡೆದಿದ್ದು, ಶಾಲಾ-ಕಾಲೇಜುಗಳು, ಬಸ್‍ಗಳು ಎಂದಿನಂತೆ ಸಂಚಾರ ನಡೆಸಿವೆ.