– ಆರ್ಎಸ್ಎಸ್ ವಾದ ತರುತ್ತಿದ್ದಾರೆ
ಬೆಳಗಾವಿ: ಬಿಜೆಪಿ ಸರ್ಕಾರಕ್ಕೆ 16 ಕೋಟಿ ಉದ್ಯೋಗ ಕೊಡಲಾಗದಿದ್ದಕ್ಕೆ ಅಗ್ನಿಪಥ್ ಎಂಬ ಡ್ರಾಮಾ ರಿಲೀಸ್ ಮಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಮಗ ಜಯ್ ಶಾಗೆ ಅಗ್ನಿಪಥ್ ಕೆಲಸಕ್ಕೆ ಹೋಗೋಕೆ ಹೇಳಿ ನೋಡೋಣ. ಯಾವ ಮಂತ್ರಿ, ಎಂಎಲ್‍ಎ ಮಕ್ಕಳು ಅಗ್ನಿಪಥ್ ಕೆಲಸಕ್ಕೆ ಹೋಗ್ತಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ರಾಜ್ಯಕ್ಕೆ ಬಂದಿದ್ದಾರೆ ಅಂದ್ರೆ ಅವರಿಗೆ ಮರ್ಯಾದೆ ಕೊಡೋದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಕಾಂಗ್ರೆಸ್‍ನವರು ಆಗಿರಬಹುದು ಬೇರೆ ಯಾರೋ ಆಗಿರಬಹುದು. ಕಾನೂನು ಸುವ್ಯವಸ್ಥೆ ಹದಗೆಡಬಾರದು ಅಂತಾ ಪೊಲೀಸರು ಕ್ರಮಕೈಗೊಂಡಿದ್ದಾರೆ. ಎಲ್ಲಾ ಕಡೆ ಬೆಂಕಿ ಹಚ್ಚೋದು ಕಲ್ಲು ಒಡೆಯೋದು ನಡೀತಿದೆ ಅದಕ್ಕೋಸ್ಕರ ಮುಂಜಾಗ್ರತೆ ತಗೆದುಕೊಂಡಿರಬಹುದು. ಆದ್ರೆ, ಪ್ರತಿಭಟನೆಯನ್ನು ಒಂದು ದಿನ ತಡೆಯಬಹುದು ಅಷ್ಟೇ ಎಂದರು. ಇದನ್ನೂ ಓದಿ: ಯಡಿಯೂರಪ್ಪ ಜೊತೆ ಮಾತ್ರ ಹೆಚ್ಚು ಮಾತನಾಡಿದ ಮೋದಿ
Advertisement
ಯಾರನ್ಯಾರು ತಡೆಯೋಕಾಗಲ್ಲ. ನನ್ನನ್ನು ನೀವು ತಡೆಯೋಕಾಗಲ್ಲ. ನಿಮ್ಮನ್ನು ನಾವು ತಡೆಯೋಕಾಗಲ್ಲ. ಅದೇ ರೀತಿ ಪ್ರಜಾಪ್ರಭುತ್ವದಲ್ಲಿ ಯಾವ ಹೋರಾಟ ತಡೆಯ ಸಾಧ್ಯವಿಲ್ಲ ಎರಡು ವರ್ಷ ಕೊರೊನಾ ಟೈಮ್ ಇತ್ತು. ಪ್ರತಿ ವರ್ಷ 45 ಸಾವಿರ ಹುದ್ದೆ ಭರ್ತಿ ಆಗ್ತಿತ್ತು. 1 ಲಕ್ಷ 35 ಸಾವಿರ ಹುದ್ದೆ ಖಾಲಿ ಇರುವಾಗ ಅವರಿಗೆ ಹೊಳೆದಿದ್ದು ಅಗ್ನಿಪಥ್ ಯೋಜನೆ. ಅಗ್ನಿಪಥ್ ಯೋಜನೆಯಲ್ಲಿ ರಿಟೈರ್‍ಮೆಂಟ್ ಆದವರನ್ನು ಸೆಕ್ಯೂರಿಟಿ ಗಾರ್ಡ್ ಆಗಿ ಇಟ್ಟುಕೊಳ್ತೀವಿ ಎಂದು ಹೇಳುತ್ತಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಯಾವ ದೇಶದಲ್ಲಿ ಸೈನಿಕ ಸೇವೆ ಕಡ್ಡಾಯ? – ಟೂರ್ ಆಫ್ ಡ್ಯೂಟಿ ಎಲ್ಲಿದೆ?
Advertisement
Advertisement
ಬಿಜೆಪಿ ಕಚೇರಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಇಟ್ಟುಕೊಳ್ತೀವಿ ಅಂತಾ ಬಿಜೆಪಿ ಲೀಡರ್ ಹೇಳ್ತಾರೆ. ಹಾಗಾದರೆ ಇವರ ಮೆಂಟಾಲಿಟಿ ಯಾವ ಮಟ್ಟಕ್ಕಿದೆ. ಬಡವರ ಮಕ್ಕಳು ಹೋಗ್ತಾರೆ. 16 ಕೋಟಿ ಉದ್ಯೋಗ ಕೊಡಲಾಗದಿದ್ದಕ್ಕೆ ಅಗ್ನಿಪಥ್ ಡ್ರಾಮಾ ರಿಲೀಸ್ ಮಾಡಿದ್ದಾರೆ. ಪ್ರತಿಯೊಂದರಲ್ಲೂ ಆರ್‍ಎಸ್‍ಎಸ್ ವಾದ ತರುತ್ತಿದ್ದಾರೆ. ವೈಯಕ್ತಿಕವಾಗಿ ನನಗೆ ವಿರೋಧ ಇಲ್ಲ. ಜಾಬ್ ಸೆಕ್ಯೂರಿಟಿ, ಹೆಲ್ತ್ ಸೆಕ್ಯೂರಿಟಿ, ಪೇನ್ಷನ್ ಇಲ್ಲ. ರಿಟೈಡ್ ಆದ ಎಷ್ಟೋ ಮಾಜಿ ಸೈನಿಕರಿಗೆ ಉದ್ಯೋಗ ಸಿಗುತ್ತಿಲ್ಲ ತೀವ್ರ ಆಕ್ರೋಶ ಹೊರಹಾಕಿದ್ದಾರೆ.