ಪಾಟ್ನಾ: ಭಾರತೀಯ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಕೇಂದ್ರ ಸರ್ಕಾರ ಆರಂಭಿಸಿರುವ `ಅಗ್ನಿಪಥ್’ ಅಲ್ಪಾವಧಿಯ ನೇಮಕಾತಿ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಿನ್ನೆಯಿಂದಲೂ ಪ್ರತಿಭಟನೆ ನಡೆಯುತ್ತಿದ್ದು, ಇಂದು ಬಿಹಾರದಲ್ಲಿ ನಡೆಯುತ್ತಿರುವ ಸೇನಾಕಾಂಕ್ಷಿಗಳ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ.
ಬುಧವಾರ ಆರಂಭವಾಗಿದ್ದ ಪ್ರತಿಭಟನೆ, ಇಂದೂ ಸಹ ಮುಂದುವರಿದಿದೆ. ಬಿಹಾರದ ಹಲವು ಭಾಗಗಳಲ್ಲಿ ಸತತ 2ನೇ ದಿನ ರೈಲು ಮತ್ತು ವಾಹನ ಸಂಚಾರಕ್ಕೆ ಸೇನಾ ಆಕಾಂಕ್ಷಿಗಳು ಅಡ್ಡಿಪಡಿಸಿದ್ದಾರೆ. ಭಭುವಾ ರೋಡ್ ರೈಲ್ವೆ ನಿಲ್ದಾಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಗಾಜಿನ ಕಿಟಕಿಗಳನ್ನು ಲಾಠಿಗಳಿಂದ ಒಡೆದು ಹಾಕಿದ್ದು, ರೈಲಿನ ಒಂದು ಕೋಚ್‌ಗೆ ಬೆಂಕಿ ಹಚ್ಚಿದ್ದಾರೆ. ಇದನ್ನೂ ಓದಿ: ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಮರನ್ನು ಹತ್ಯೆ ಮಾಡುವುದು, ಕಾಶ್ಮೀರ ಪಂಡಿತರ ಹತ್ಯೆಗೆ ಸಮ: ಸಾಯಿ ಪಲ್ಲವಿ ವೀಡಿಯೋ ವೈರಲ್
आरा स्टेशन पर उग्र छात्रों को हटाने के लिए आश्रु गैस के गोले देखिए अब दागे जा रहे हैं @ndtvindia @Anurag_Dwary pic.twitter.com/s0YP3bq1Tx
— manish (@manishndtv) June 16, 2022
ಜೆಹನಾಬಾದ್‌ನಲ್ಲಿ ರೈಲ್ವೆ ಸಂಚಾರಕ್ಕೆ ಅಡ್ಡಿಪಡಿಸಲು ರೈಲು ಹಳಿಗಳ ಮೇಲೆ ನಿಂತುಕೊಂಡಿದ್ದ ಪ್ರತಿಭಟನಾಕಾರರನ್ನು ತೆರವುಗೊಳಿಸಲು ಪೊಲೀಸರು ಬೆನ್ನಟ್ಟಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪೊಲೀಸರು ಸೇರಿದಂತೆ ಅನೇಕ ಮಂದಿಗೆ ಗಾಯಗಳಾಗಿವೆ.
ಆರಾಹ್‌ದಲ್ಲಿನ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾಕಾರರನ್ನು ಚೆದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. `ಇಂಡಿಯನ್ ಆರ್ಮಿ ಲವರ್ಸ್’ ಎಂಬ ಬ್ಯಾನರ್ ಹಿಡಿದು, ಹೊಸ ನೇಮಕಾತಿ ಯೋಜನೆಗೆ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇದನ್ನೂ ಓದಿ: ‘ಜೈ ಶ್ರೀರಾಮ್’ ಎನ್ನುತ್ತಾ ಮುಸ್ಲಿಂ ಹತ್ಯೆ ವಿಚಾರ: ಸಾಯಿ ಪಲ್ಲವಿ ಬೆಂಬಲಕ್ಕೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ
ಏನಿದು ಯೋಜನೆ?: ಭಾರತೀಯ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅಗ್ನಿಪಥ್ ಎಂಬ ಹೊಸ ಅಲ್ಪಾವಧಿಯ ನೇಮಕಾತಿ ಯೋಜನೆ ಪ್ರಾರಂಭಿಸಿದೆ. ಅಗ್ನಿಪಥ್ ಎಂದು ಕರೆಯಲ್ಪಡುವ ಯೋಜನೆ 17.5 ರಿಂದ 21 ವರ್ಷ ವಯಸ್ಸಿನ ಯುವಕರು 4 ವರ್ಷಗಳ ಅವಧಿಗೆ 3 ಸೇವೆಗಳಲ್ಲಿ ಯಾವುದಾದರೂ ಒಂದರಲ್ಲಿ ಸೇರಿಕೊಳ್ಳಬಹುದು. ಈ ಯುವ ಯೋಧರನ್ನು `ಅಗ್ನಿವೀರ್’ ಎಂದು ಕರೆಯಲಾಗುತ್ತದೆ. ಈ ಹೊಸ ನೇಮಕಾತಿಯನ್ನು ಕೇಂದ್ರ ಸರ್ಕಾರ ಮಂಗಳವಾರ ಅನಾವರಣಗೊಳಿಸಿತು.
ಯಾರು ಅರ್ಹರು?: 17.5 ರಿಂದ 21 ವರ್ಷದೊಳಗಿನ ವಯೋಮಿತಿಯಲ್ಲಿ ಸುಮಾರು 30,000-40,000 ರೂ. ವೇತನದಲ್ಲಿ ಸೈನಿಕರನ್ನು ನೇಮಿಸಿಕೊಳ್ಳಲಾಗುವುದು. ಯುವತಿಯರು ಕೂಡ ನೇಮಕಾತಿ ಯೋಜನೆಗೆ ಅರ್ಹರಾಗಿರುತ್ತಾರೆ.