ಬೆಂಗಳೂರು: ಬಿಜೆಪಿ ಕಚೇರಿಯ ಬಾಗಿಲು ಕಾಯಲು ಯುವಕರು ಸೈನ್ಯ ಸೇರಬೇಕೆ ಸೆಕ್ಯೂರಿಟಿ ಗಾರ್ಡ್ ಮಾಡಿಕೊಳ್ಳಲು ಬಿಜೆಪಿಯವರಿಗೆ ಸೈನ್ಯಕ್ಕೆ ಸೇರಿದ ಅಗ್ನಿವೀರರೆ ಬೇಕೆ? ಯುವ ಸಮುದಾಯದ ಬಗ್ಗೆ ಬಿಜೆಪಿಯವರ ನಿಲುವೇನು ಎಂಬುದು ಅವರ ಹೇಳಿಕೆಗಳಿಂದಲೇ ತಿಳಿಯುತ್ತದೆ ಎಂದು ಬಿಜೆಪಿ ವಿರುದ್ಧ ಟ್ವಿಟ್ಟರ್ ಮೂಲಕ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ.
Advertisement
ಟ್ವೀಟ್‍ನಲ್ಲಿ ಏನಿದೆ?
ಅಗ್ನಿಪಥ್ ವಿರುದ್ದ ಹೋರಾಡುತ್ತಿರುವ ಯುವಕರ ಬಗ್ಗೆ ಬಿಜೆಪಿಯವರ ಹೇಳಿಕೆಗಳು ಆ ಪಕ್ಷದ ಮನೋವಿಕಾರವನ್ನು ಅನಾವರಣ ಮಾಡಿದೆ. ಯೋಜನೆಯ ಮೂಲಕ ಆಯ್ಕೆಯಾಗಿ ನಿರ್ಗಮಿಸುವ ಅಗ್ನಿವೀರರು ಬಿಜೆಪಿ ಕಚೇರಿ ಕಾಯುವ ಸೆಕ್ಯೂರಿಟಿ ಗಾರ್ಡ್ ಆಗಲು ಆದ್ಯತೆ ಎಂದಿರುವ ಕೈಲಾಶ್ ಹೇಳಿಕೆ ಖಂಡನೀಯ. ಈ ಹೇಳಿಕೆ ಯುವ ಸಮುದಾಯ ಮಾತ್ರವಲ್ಲ ಇಡೀ ಸೈನ್ಯಕ್ಕೆ ಮಾಡಿದ ಅವಮಾನ.ಬಿಜೆಪಿ ಕಚೇರಿಯ ಬಾಗಿಲು ಕಾಯಲು ಯುವಕರು ಸೈನ್ಯ ಸೇರಬೇಕೆ? ಸೆಕ್ಯೂರಿಟಿ ಗಾರ್ಡ್ ಮಾಡಿಕೊಳ್ಳಲು ಬಿಜೆಪಿಯವರಿಗೆ ಸೈನ್ಯಕ್ಕೆ ಸೇರಿದ ಅಗ್ನಿವೀರರೆ ಬೇಕೆ? ಯುವ ಸಮುದಾಯದ ಬಗ್ಗೆ ಬಿಜೆಪಿಯವರ ನಿಲುವೇನು ಎಂಬುದು ಅವರ ಹೇಳಿಕೆಗಳಿಂದಲೇ ತಿಳಿಯುತ್ತದೆ. ಸೇನೆಯಲ್ಲಿ ಸೇವೆ ಸಲ್ಲಿಸಿದವರು ಬಿಜೆಪಿಯ ಪರಿಚಾರಕರಾಗಬೇಕೆಂಬುದು ಬಿಜೆಪಿ ನಾಯಕರ ಅಜೆಂಡಾವೇ? ಇದನ್ನೂ ಓದಿ: ಅಮಿತ್ ಶಾ ಮಗ ಜಯ್ ಶಾಗೆ ಅಗ್ನಿಪಥ್ ಕೆಲಸಕ್ಕೆ ಹೋಗೋಕೆ ಹೇಳಿ: ಲಕ್ಷ್ಮೀ ಹೆಬ್ಬಾಳ್ಕರ್
Advertisement
2#BJP ಕಚೇರಿಯ ಬಾಗಿಲು ಕಾಯಲು ಯುವಕರು ಸೈನ್ಯ ಸೇರಬೇಕೆ?
ಸೆಕ್ಯೂರಿಟಿ ಗಾರ್ಡ್ ಮಾಡಿಕೊಳ್ಳಲು BJPಯವರಿಗೆ ಸೈನ್ಯಕ್ಕೆ ಸೇರಿದ ಅಗ್ನಿವೀರರೆ ಬೇಕೆ?
ಯುವ ಸಮುದಾಯದ ಬಗ್ಗೆ BJP ಯವರ ನಿಲುವೇನು ಎಂಬುದು ಅವರ ಹೇಳಿಕೆಗಳಿಂದಲೇ ತಿಳಿಯುತ್ತದೆ. ಸೇನೆಯಲ್ಲಿ ಸೇವೆ ಸಲ್ಲಿಸಿದವರು ಬಿಜೆಪಿಯ ಪರಿಚಾರಕರಾಗಬೇಕೆಂಬುದು BJP ನಾಯಕರ ಅಜೆಂಡಾವೇ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 20, 2022
Advertisement
ಇತ್ತ ಆರಗ ಜ್ಞಾನೇಂದ್ರ ಅಗ್ನಿಪಥ್ ವಿರುದ್ಧ ಬೀದಿಗೆ ಬಿದ್ದಿರುವ ಯುವಕರನ್ನು ಪುಂಡರು ಎಂದಿದ್ದಾರೆ. ಜ್ಞಾನೇಂದ್ರರವರೆ, ಸೈನ್ಯಕ್ಕೆ ಸೇರುವುದಾಕ್ಕಾಗಿಯೇ ಲಕ್ಷಾಂತರ ಯುವಕರು ತಪ್ಪಸ್ಸಿನಂತೆ ಶ್ರಮ ಪಟ್ಟಿರುತ್ತಾರೆ. ಆ ಯುವಕರಿಗೆ ಕೇವಲ 4 ವರ್ಷ ಕೆಲಸ ಕೊಟ್ಟು ನಂತರ ಮನೆಗೆ ಕಳುಹಿಸಿದರೆ ಅವರೇನು ಮಾಡಬೇಕು? ಯುವಕರು ಪ್ರತಿಭಟಿಸುವುದು ತಪ್ಪೆ? ಅಗ್ನಿಪಥ್ ಕೇವಲ ಯುವಕರ ಬದುಕಿಗೆ ಮಾತ್ರ ಸಂಬಂಧಿಸಿದಲ್ಲ. ದೇಶದ ಭದ್ರತೆಯ ವಿಚಾರದಲ್ಲೂ ಇದು ಅತ್ಯಂತ ಅಪಾಯಕಾರಿ ಪ್ರಯೋಗ. ದೇಶದ ರಕ್ಷಣೆಯಲ್ಲಿ ತೊಡಗಿಕೊಳ್ಳುವ ಹಾಗೂ ಗಡಿ ಕಾಯುವ ಯೋಧನನ್ನು ರೂಪಿಸಲು ವರ್ಷಗಳೇ ಬೇಕು. ಕೇವಲ 6 ತಿಂಗಳ ತರಬೇತಿ ಪಡೆದ ಯುವಕ ಪರಿಪೂರ್ಣ ಯೋಧನಾಗಲು ಸಾಧ್ಯವೆ? ಕೇಂದ್ರಕ್ಕೆ ದೇಶದ ಭದ್ರತಾ ವಿಚಾರದಲ್ಲಿ ರಾಜಿಯೇಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಆಕ್ಸಿಜನ್ ಕೊಡೋಕೆ ಆಗದವರು ಈಗ ಯೋಗ ಮಾಡುವುದಕ್ಕೆ ಬಂದಿದ್ದಾರೆ: ಸಿದ್ದರಾಮಯ್ಯ