ನವದೆಹಲಿ: ಸಿಯಾಚಿನ್‌ನಲ್ಲಿ (Siachen) ಕರ್ತವ್ಯದ ವೇಳೆ ಅಗ್ನಿವೀರ್ (Agniveer) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಲೇಹ್ ಪ್ರಧಾನ ಕಚೇರಿಯ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಭಾನುವಾರ ತಿಳಿಸಿದೆ.
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಸೇನಾ ಪಡೆ, ಮಹಾರಾಷ್ಟ್ರ ಮೂಲದ ಅಗ್ನಿವೀರ್ ಗವಟೆ ಅಕ್ಷಯ್ ಲಕ್ಷ್ಮಣ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ಇದನ್ನೂ ಓದಿ: Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು
Quartered in snow silent to remain, when the bugle calls they shall rise and march again
All ranks of Fire and Fury Corps salute the supreme sacrifice of #Agniveer (Operator) Gawate Akshay Laxman, in the line of duty, in the unforgiving heights of #Siachen and offer deepest… pic.twitter.com/1Qo1izqr1U
— @firefurycorps_IA (@firefurycorps) October 22, 2023
ಕಾರಕೋರಂ ಶ್ರೇಣಿಯಲ್ಲಿ ಸುಮಾರು 20,000 ಅಡಿ ಎತ್ತರದಲ್ಲಿರುವ ಸಿಯಾಚಿನ್ ಹಿಮನದಿಯು ವಿಶ್ವದ ಅತಿ ಎತ್ತರದ ಮಿಲಿಟರಿ ವಲಯವಾಗಿದೆ. ಅಲ್ಲಿ ಸೈನಿಕರು ಹಿಮಪಾತ ಮತ್ತು ಶೀತ ಗಾಳಿಯೊಂದಿಗೆ ಹೋರಾಡಬೇಕಿದೆ. ಲಕ್ಷ್ಮಣ್ ಸಾವಿನ ನಿಖರ ಮಾಹಿತಿ ತಿಳಿದುಬಂದಿಲ್ಲ.
ಅಗ್ನಿವೀರ್ (ಆಪರೇಟರ್) ಗವಟೆ ಅಕ್ಷಯ್ ಲಕ್ಷ್ಮಣ್ ಅವರ ಅತ್ಯುನ್ನತ ತ್ಯಾಗಕ್ಕೆ ನಮಸ್ಕರಿಸುತ್ತೇವೆ. ಕುಟುಂಬಕ್ಕೆ ತೀವ್ರವಾದ ಸಂತಾಪಗಳು ಎಂದು ಎಕ್ಸ್‌ನಲ್ಲಿ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಗಾರ್ಬಾ ನೃತ್ಯದಲ್ಲಿ ತೊಡಗಿದ್ದವರಿಗೆ ಹೃದಯಾಘಾತ – 10 ಸಾವು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]