ಬೆಂಗಳೂರು: 3 ವರ್ಷದ ಪ್ರೀತಿಯನ್ನು ಬಿಟ್ಟು ಬೇರೆ ಮದ್ವೆಗೆ ಒಪ್ಪಿಗೆ ಸೂಚಿಸಿದ್ದ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಯುವಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ (Bengaluru) ವರ್ತೂರಿನಲ್ಲಿ (Varthuru) ನಡೆದಿದೆ.
ಕೋಲಾರದ (Kolar) ನರಸಾಪುರ ಮೂಲದ ಯುವಕ ನವಾಜ್ ತನ್ನ ಲವ್ವರ್ ಆಗಿದ್ದ ಪಶ್ಚಿಮ ಬಂಗಾಳ ಮೂಲದ ನಂದಿನಿ ದಾಸ್‌ಗೆ ಚಾಕುವಿನಿಂದ ಇರಿದಿದ್ದಾನೆ. ಇದನ್ನೂ ಓದಿ: ಡಿಕೆಶಿಗೆ ಧರ್ಮ, ಸಂಸ್ಕೃತಿ ಬಗ್ಗೆ ಅರಿವಿದೆ – ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
ಮೂರು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಆದರೆ ಇಬ್ಬರ ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಯುವತಿ ನವಾಜ್‌ನಿಂದ ದೂರಾಗಿ ಬೇರೆ ಮದುವೆಗೆ ಒಪ್ಪಿಗೆ ಸೂಚಿಸಿದ್ದಳು. ಇದರಿಂದ ಇಬ್ಬರ ನಡುವೆ ಗಲಾಟೆ ಆಗಿತ್ತು. ಇದರಿಂದ ಕೋಪಗೊಂಡು ಯುವಕ ಯಾರೂ ಇಲ್ಲದ ವೇಳೆ ಯುವತಿ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಬಳಿಕ ತಾನೂ ಕತ್ತಿಗೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸದ್ಯ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎ ಸರ್ಟಿಫಿಕೇಟ್
