ಧಾರವಾಡ: ಹಾನಿಗೀಡಾದ ಮೆಣಸಿನಕಾಯಿ ಬೆಳೆ ಕೈಯಲ್ಲಿ ಹಿಡಿದುಕೊಂಡ ಪ್ರತಿಭಟನೆ ಮಾಡಿದ ರೈತರು ಬೆಳೆ ವಿಮೆಗೆ ಆಗ್ರಹಿಸಿರುವ ಘಟನೆ ಧಾರವಾಡದಲ್ಲಿ ಕಂಡುಬಂದಿದೆ.
ಅಕಾಲಿಕ ಮಳೆಯಿಂದಾಗಿ ರೈತ ಬೆಳೆದ ವಿವಿಧ ಬೆಳೆಗಳು ಹಾನಿಗೀಡಾಗಿದ್ದು, ಸರ್ಕಾರ ಕೂಡಲೇ ಬೆಳೆವಿಮೆ ಬಿಡುಗಡೆ ಮಾಡಿ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿ, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ನಾಯಕನೂರು ಗ್ರಾಮದ ರೈತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಐ ಡೋಂಟ್ ಕೇರ್, ಐ ಡೋಂಟ್ ಲೈಕ್ – ಲಸಿಕೆ ಬೇಡವೆಂದು ಹಠ ಹಿಡಿದ ವೃದ್ಧ
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಹಾನಿಗೀಡಾದ ಮೆಣಸಿನಕಾಯಿ ಬೆಳೆ ಕೈಯಲ್ಲಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದ ರೈತರು, ಅಕಾಲಿಕ ಮಳೆಗೆ ಮೆಣಸಿನಕಾಯಿ, ಹತ್ತಿ, ಕಡಲೆ, ಗೋಧಿ, ಜೋಳದ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಸರ್ಕಾರ ಕೂಡಲೇ ರೈತರ ನೆರವಿಗೆ ಬಂದು ಬೆಳೆವಿಮೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಓಮಿಕ್ರಾನ್ ಬಗ್ಗೆ ಆತಂಕ ಬೇಡ- ಸೋಂಕಿತನ ಅಭಯ
ಅಕಾಲಿಕ ಮಳೆಯಿಂದ ಇಡೀ ರೈತ ಸಮುದಾಯ ಕಂಗೆಟ್ಟಿದ್ದು, ಸರ್ಕಾರದ ಮುಂದೆ ರೈತರು ಕೈಚಾಚುವಂತ ಪರಿಸ್ಥಿತಿ ನಿರ್ಮಾಣವಾಗಿದೆ, ಕೂಡಲೇ ಸರ್ಕಾರ ರೈತರ ಪರಿಸ್ಥಿತಿ ಅರಿತು ಅವರ ನೆರವಿಗೆ ಬರಬೇಕಾಗಿದೆ ಎಂದು ರೈತ ರಾಜಶೇಖರಯ್ಯ ಹಿರೇಮಠ ಆಗ್ರಹಿಸಿದ್ದಾರೆ.