ಶಿವಮೊಗ್ಗ: ಕಾಡಾನೆ ದಾಳಿಗೆ (Elephant Attack) ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ನಗರ ಸಮೀಪದ ಆಲದೇವರ ಹೊಸೂರು ಬಳಿ ಸಂಭವಿಸಿದೆ. ಮೃತ ಕಾರ್ಮಿಕನನ್ನು ಹನುಮಂತಪ್ಪ ಎಂದು ಗುರುತಿಸಲಾಗಿದೆ.
ಮೃತ ಹನುಮಂತಪ್ಪ ಜಮೀನಿಗೆ ಹೋಗಿ ಮನೆಗೆ ಮರಳುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಎಫ್‌ಒ ಪ್ರಸನ್ನ ಕೃಷ್ಣ ಪಟಗಾರ್, ತೋಟಕ್ಕೆ ಕೂಲಿ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುವಾಗ ಆನೆ ದಾಳಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ಹನುಮಂತಪ್ಪ ಅವರು ಸಂಪತ್ ಕುಮಾರ್ ಎಂಬುವವರ ತೋಟದ ಮನೆಯಲ್ಲಿ ವಾಸವಾಗಿದ್ದರು. ಆಶ್ಫಾಕ್ ಅಹಮದ್ ಖಾನ್ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರು. ಹನುಂತಪ್ಪಗೆ ಪತ್ನಿ, ನಾಲ್ವರು ಮಕ್ಕಳು ಇದ್ದಾರೆ.