ಉಡುಪಿ: ಜಿಲ್ಲೆ ಹೆಬ್ರಿ ತಾಲೂಕಿನ ಸೋಮೇಶ್ವರದ 13ನೇ ತಿರುವಿನಲ್ಲಿ ಬೃಹತ್ ಮರ ಧರೆಗುರುಳಿದೆ. ಆಗುಂಬೆ ಘಾಟ್ ರಸ್ತೆಗೆ ಬೃಹತ್ ಮರ ಉರುಳಿ ಬಿದ್ದು ಸುಮಾರು ಎರಡು ಗಂಟೆಗಳ ಕಾಲ ರಸ್ತೆ ಬ್ಲಾಕ್ ಆಗಿದೆ.
ರಸ್ತೆಗೆ ಸಂಪೂರ್ಣವಾಗಿ ಅಡ್ಡಲಾಗಿ ಮರ ಬಿದ್ದ ಕಾರಣ ವಾಹನ ಸಂಚಾರಕ್ಕೆ ವ್ಯತ್ಯಯ ಆಗಿದೆ. ಸುಮಾರು ಎರಡು ಗಂಟೆಗಳ ಕಾಲ ಉಡುಪಿ ಜಿಲ್ಲೆ ಮತ್ತು ಶಿವಮೊಗ್ಗ ಜಿಲ್ಲೆಯ ಸಂಪರ್ಕ ಕಡಿತಗೊಂಡಿದೆ. ಸುಮಾರು ಮೂರು ಕಿಲೋಮೀಟರ್ ಗಳವರೆಗೆ ರಸ್ತೆ ಬದಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರ ತೆರವುಗೊಳಿಸಿದರು. ಇದನ್ನೂ ಓದಿ: ಆನೆಗೆ ತನ್ನ ಕೈಯಾರೆ ಆಹಾರ ತಿನ್ನಿಸಿದ ವೃದ್ಧೆ – ಹೃದಯಸ್ಪರ್ಶಿ ವೀಡಿಯೋ ವೈರಲ್
ಅರಣ್ಯ ಇಲಾಖೆಗೆ ಪ್ರಯಾಣಿಕರು ಸಹಕಾರ ನೀಡಿದರು. ಆಗುಂಬೆಯಲ್ಲಿ ಕಳೆದ ಮೂರು ತಿಂಗಳಿಂದ ವಿಪರೀತ ಮಳೆ ಬೀಳುತ್ತಿರುವ ಕಾರಣ ಗುಡ್ಡ ತೇವಗೊಂಡಿದೆ. ವಾರದಲ್ಲಿ ಒಂದೆರಡು ಬಾರಿ ಮರ ರಸ್ತೆಗೆ ಉರುಳುವುದು ಸಾಮಾನ್ಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳೀಯ ಶ್ರೀಧರ ಮಾತನಾಡಿ, ಮಳೆಗಾಲದಲ್ಲಿ ಆಗುಂಬೆ ಘಾಟ್ ರಸ್ತೆಯಲ್ಲಿ ಆಗಾಗ ಮರಗಳು ರಸ್ತೆಗೆ ಉರುಳುತ್ತಿರುತ್ತದೆ. ಮರ ಬಿದ್ದು ಅಲ್ಲಲ್ಲಿ ರಸ್ತೆಗೂ ಹಾನಿಯಾಗಿದೆ. ರಸ್ತೆಯ ಪಕ್ಕದಲ್ಲಿರುವ ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆ ತೆರವುಗೊಳಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ