ಚಿಕ್ಕೋಡಿ: ಮನೆಯಂಗಳ ಸ್ವಚ್ಛವಾಗಿರಲಿ ಹಾಗೂ ಚೆಂದವಾಗಿ ಕಾಣಲಿ ಎಂಬ ಸಂಕೇತದ ಹಿನ್ನೆಲೆಯಲ್ಲಿ ಮನೆ ಮುಂದೆ ರಂಗೋಲಿ ಹಾಕುತ್ತಾರೆ. ಆದರೆ ಇಲ್ಲಿ ಕೆಲ ವಿದ್ಯಾರ್ಥಿಗಳು ರಂಗೋಲಿ ಹಾಕುತ್ತಲೇ ಅಧ್ಯಯನ ಮಾಡುತ್ತಿದ್ದು, ಇಂತಹ ಹೊಸ ಐಡಿಯಾವನ್ನು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಶ್ನಿಸಲಾಗುವ ವಿಜ್ಞಾನ, ಗಣಿತ ಮತ್ತು ಸಮಾಜ ವಿಜ್ಞಾನದ ರೇಖಾ ಚಿತ್ರಗಳನ್ನ ರಂಗೋಲಿಯಲ್ಲಿ ಬಿಡಿಸುವ ಮೂಲಕ ವಿದ್ಯಾರ್ಥಿಗಳಿಗೆ ನೆನಪಿನಲ್ಲಿ ಉಳಿಯುವಂತೆ ಮಾಡಲು ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ಅವರು ಈ ವಿಧಾನ ಪ್ರಯೋಗ ಮಾಡಿದ್ದಾರೆ.
Advertisement
Advertisement
ತಮ್ಮ ಓದಿಗೆ ಅನುಕೂಲ ಆಗುವಂತೆ ಪರೀಕ್ಷೆಯಲ್ಲಿ ಕೇಳಲಾಗುವ ಪ್ರಶ್ನೆಗಳ ಬಗೆಗಿನ ರೇಖಾ ಚಿತ್ರಗಳನ್ನು ರಂಗೋಲಿಯಲ್ಲಿ ಬಿಡಿಸಲಾಗುತ್ತಿದೆ. ಹೀಗಾಗಿ ಈ ವಿಧಾನದಿಂದ ನಮಗೆ ಸಾಕಷ್ಟು ಅನುಕೂಲವಾಗಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಇಂತಹ ವಿಶೇಷ ಪ್ರಯತ್ನಕ್ಕೆ ಕೈ ಹಾಕಿದ್ದು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಜೊತೆಗೆ ರಾಜ್ಯದ ಬೇರೆ ಶಾಲೆ ಮಕ್ಕಳಿಗೂ ಕೂಡ ಅನಕೂಲವಾಗಲಿ ಎಂಬುವುದು ಅಧಿಕಾರಿಗಳ ಉದ್ದೇಶವಾಗಿದೆ.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv